ಭ್ರಷ್ಟಾಚಾರದ ಆರೋಪ | ರಾಜೀನಾಮೆ ನೀಡಿ ಗೃಹಸಚಿವ

anil deshmukh
05/04/2021

ಮುಂಬೈ: ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ತಮ್ಮ ಸ್ಥಾನಕ್ಕೆ ರಾಜೀಮೆ ನೀಡಿದ್ದು,  ರಾಜೀನಾಮೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಗೃಹ ಸಚಿವ ಅನಿಲ್ ದೇಶ್‌ಮುಖ್, ಪ್ರತಿ ತಿಂಗಳು 100 ಕೋಟಿ ವಸೂಲಿ ಮಾಡಿ ನೀಡುವಂತೆ ಕೆಲವು ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದ್ದರು ಎಂದು ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಆರೋಪಿಸಿದ್ದರು.

ಈ ಸಂಬಂಧ ತನಿಖೆ ನಡೆಸುವಂತೆ ಪರಮ್ ಬೀರ್ ಸೇರಿದಂತೆ ಅನೇಕರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಜಯಶ್ರೀ ಪಾಟೀಲ್ ಎಂಬುವವರ ಅರ್ಜಿ ವಿಚಾರಣೆ ನಡೆಸಿ ಈ ಆದೇಶ ನೀಡಿದ ನ್ಯಾಯಾಲಯ, ಪರಮ್ ಬೀರ್ ಸಿಂಗ್, ವಕೀಲರಾದ ಘನಶ್ಯಾಮ್ ಉಪಾಧ್ಯಾಯ್ ಮತ್ತು ಮೋಹನ್ ಭಿಡೆ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿತು.

ಇತ್ತೀಚಿನ ಸುದ್ದಿ

Exit mobile version