ರಾತ್ರೋ ರಾತ್ರಿ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರು: ಶಸ್ತ್ರ ಚಿಕಿತ್ಸೆಗೆ ಸಿದ್ಧತೆ - Mahanayaka
3:17 AM Monday 15 - September 2025

ರಾತ್ರೋ ರಾತ್ರಿ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರು: ಶಸ್ತ್ರ ಚಿಕಿತ್ಸೆಗೆ ಸಿದ್ಧತೆ

rajinikanth hospitalised
01/10/2024

ಸೂಪರ್ ಸ್ಟಾರ್ ರಜನಿಕಾಂತ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಸೋಮವಾರ ತಡ ರಾತ್ರಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು,  73 ವರ್ಷದ ರಜನಿಕಾಂತ್ ಅವರು ಹೊಟ್ಟೆ ನೋವಿನಿಂದ ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ.


Provided by

ನಿನ್ನೆ ರಾತ್ರಿ ಹಠಾತ್ ಅಸ್ವಸ್ಥರಾದ ರಜನಿಕಾಂತ್ ಅವರನ್ನು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ  ದಾಖಲಿಸಲಾಯಿತು. ರಜನಿಕಾಂತ್ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿದು ಅಭಿಮಾನಿಗಳು ಆತಂಕಕ್ಕೀಡಾಗಿದ್ದಾರೆ.

ತಮಿಳು ಮಾಧ್ಯಮಗಳ ವರದಿಗಳ ಪ್ರಕಾರ, ರಜನಿಕಾಂತ್ ಅವರಿಗೆ ಸರ್ಜರಿ ಮಾಡಿ ಹೊಟ್ಟೆಯ ಕೆಳಭಾಗದ ಬಳಿ ಸ್ಟೆಂಟ್ ಹಾಕಲಾಗುತ್ತದೆ ಎಂದು ತಿಳಿದು ಬಂದಿದೆ. ಮೂವರು ಖ್ಯಾತ ವೈದ್ಯರು ರಜನಿಕಾಂತ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಶಸ್ತ್ರ ಚಿಕಿತ್ಸೆ ಮಾಡಬೇಕಾಗಿರುವುದರಿಂದಾಗಿ ಮುಂದಿನ ಮೂರು ದಿನಗಳ ಕಾಲ ರಜನಿಕಾಂತ್ ಅವರು ಆಸ್ಪತ್ರೆಯಲ್ಲೇ ಇರಲಿದ್ದಾರೆ. ಹೃದ್ರೋಗ ತಜ್ಞರು ಕೂಡ ರಜನಿಕಾಂತ್ ಅವರನ್ನು ಪರೀಕ್ಷಿಸಿದ್ದಾರೆ. ಇಂದು ರಜನಿಕಾಂತ್ ಅವರ ಆರೋಗ್ಯದ ಬಗ್ಗೆ ಆರೋಗ್ಯ ವರದಿ ಹೊರಬರುವ ಸಾಧ್ಯತೆ ಇದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ