ಪ್ರಾಣಿ–ಪಕ್ಷಿಗಳನ್ನು ರಕ್ಷಿಸಿ ಆರೈಕೆ ಮಾಡುತ್ತಿರುವ ರಜನಿ ಶೆಟ್ಟಿಗೆ ಹಲ್ಲೆ

ಮಂಗಳೂರು ನಗರದಲ್ಲಿ ಪ್ರಾಣಿ-ಪಕ್ಷಿಗಳನ್ನು ರಕ್ಷಿಸಿ ಆರೈಕೆ ಮಾಡುತ್ತಿರುವ ಬಲ್ಲಾಳ್‌ಭಾಗ್ ನಿವಾಸಿ ರಜನಿ ಶೆಟ್ಟಿ ಅವರ ಮೇಲೆ ನೆರೆಮನೆಯ ಮಹಿಳೆಯೊಬ್ಬರು ಹಲ್ಲೆ ನಡೆಸಿರುವುದಾಗಿ ಬರ್ಕೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೋಮವಾರ ಬೆಳಗ್ಗೆ ತಾನು ಬಟ್ಟೆ ಒಣಗಲು ಹಾಕುತ್ತಿದ್ದಾಗ ಮಹಿಳೆ ಕಲ್ಲು ಎಸೆದಿದ್ದಾರೆ. ಇದರಿಂದ ತನಗೆ ಗಾಯವಾಗಿದೆ ಎಂದು ರಜನಿ ಶೆಟ್ಟಿ ದೂರಿನಲ್ಲಿ ತಿಳಿಸಿದಾರೆ.
ಮಹಿಳೆಯು ಕೆಲವು ಸಮಯದಿಂದ ಹಲ್ಲೆಗೆ ಪ್ರಯತ್ನ ನಡೆಸುತ್ತಿದ್ದರು. ನಾಯಿ, ಬೆಕ್ಕುಗಳಿಗೂ ಥಳಿಸಿದ್ದಾರೆ ಎಂದು ರಜನಿ ಶೆಟ್ಟಿ ಆರೋಪಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw