ಬ್ರೇಕಿಂಗ್ ನ್ಯೂಸ್: ರಜನಿಕಾಂತ್ ಆರೋಗ್ಯದಲ್ಲಿ ತೀವ್ರ ಏರುಪೇರು - Mahanayaka

ಬ್ರೇಕಿಂಗ್ ನ್ಯೂಸ್: ರಜನಿಕಾಂತ್ ಆರೋಗ್ಯದಲ್ಲಿ ತೀವ್ರ ಏರುಪೇರು

25/12/2020

ಹೈದರಾಬಾದ್: ಸೂಪರ್ ಸ್ಟಾರ್ ರಜನಿಕಾಂತ್ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು,  ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ.


Provided by

ರಕ್ತದೊತ್ತಡದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ರಜನಿಕಾಂತ್ ಅವರನ್ನು  ಹೈದರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸದ್ಯ ತಿಳಿದು ಬಂದಿದೆ. ಅನ್ನಾತೆ ಚಿತ್ರ ಶೂಟಿಂಗ್ ಸಂದರ್ಭದಲ್ಲಿ ಚಿತ್ರ ತಂಡದಲ್ಲಿದ್ದ ಹಲವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಆದರೆ, ರಜನಿಕಾಂತ್ ಅವರಿಗೆ ನೆಗೆಟಿವ್ ರಿಪೋರ್ಟ್ ಬಂದಿತ್ತು. ಆದರೆ ಇದೀಗ ಅವರು ಅನಾರೋಗ್ಯಕ್ಕೀಡಾಗಿರುವುದು  ಅಭಿಮಾನಿಗಳಲ್ಲಿ ತೀವ್ರ ಆತಂಕವನ್ನುಂಟು ಮಾಡಿದೆ.

ರಜನಿಕಾಂತ್ ಅವರ ರಕ್ತದೊತ್ತಡದಲ್ಲಿ ಏರುಪೇರಾಗಿದೆ ಎಂದು ತಿಳಿದು ಬಂದಿದೆ. ತೀವ್ರವಾದ ಸುಸ್ತು ಇದೆ. ಬೇರೆ ಯಾವುದೇ ತೊಂದರೆಗಳಿಲ್ಲ ಎಂದು ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ. ಆದರೆ ರಜನಿಕಾಂತ್ ಅವರ ಅನಾರೋಗ್ಯದ ಸುದ್ದಿ ಕೇಳಿ ಅಭಿಮಾನಿಗಳು ಕಂಗಾಲಾಗಿದ್ದಾರೆ.

ಇತ್ತೀಚಿನ ಸುದ್ದಿ