ರಾಜ್ಯ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ನಿಧನ - Mahanayaka

ರಾಜ್ಯ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ನಿಧನ

manjunath
23/01/2022


Provided by

ಬೆಂಗಳೂರು: ರಾಜ್ಯ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರು ಹೃದಯಾಘಾತದಿಂದ ಶನಿವಾರ ರಾತ್ರಿ ನಿಧನರಾಗಿದ್ದಾರೆ.

1953ರಲ್ಲಿ ಜನಿಸಿದ ಅವರು 1974ರಲ್ಲಿ ವಕೀಲರಾಗಿ ಹೈಕೋರ್ಟ್​ನಲ್ಲಿ ಅಭ್ಯಾಸ ಆರಂಭಿಸಿದರು. 2000ನೇ ಇಸವಿಯಲ್ಲಿ ಹೈಕೋರ್ಟ್​ನ ಹೆಚ್ಚುವರಿ ನ್ಯಾಯಾಧೀಶರಾಗಿದ್ದರು. 2001ರಲ್ಲಿ ಪೂರ್ಣ ಪ್ರಮಾಣದ ನ್ಯಾಯಾಧೀಶರಾಗಿ ನೇಮವಾಗಿದ್ದರು.

ಮೃತರ ಅಂತಿಮ ದರ್ಶನಕ್ಕೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿರುವ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ನೆಲಮಂಗಲದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ. ಮಂಜುನಾಥ್ ಅವರ ಸಾವಿಗೆ ಕುಟುಂಬ ಹಾಗೂ ಬಂಧುಮಿತ್ರರು ಕಂಬನಿ ಮಿಡಿದಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಸ್ ​ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ; ಯುವಕನಿಗೆ ಧರ್ಮದೇಟು

ಮಗುವನ್ನು ಕೊಂದು ಕಪಾಟುವಿನಲ್ಲಿಟ್ಟಿದ್ದ ಕಿರಾತಕಿಯ ಬಂಧನ

ನಿರ್ಮಾಪಕ ಉಮಾಪತಿ ಕೊಲೆಯತ್ನ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಸೆರೆ

ಬಿಜೆಪಿ ಸಂಸದರ ಮೇಲೆ ಕಲ್ಲು ತೂರಾಟ

ಪತ್ನಿಯನ್ನು ಚುಡಾಯಿಸುತ್ತಿದ್ದ ಯುವಕನನ್ನು ಬರ್ಬರ ಹತ್ಯೆಗೈದ ಪತಿ

 

ಇತ್ತೀಚಿನ ಸುದ್ದಿ