ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಲಕ್ಷ್ಮಣ ಸವದಿ, ಉಡುಪಿಯ ನಯನಾ ಗಣೇಶ್ ನೇಮಕ
ಬೆಂಗಳೂರು: ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಎಂಎಲ್‌ಸಿ ಲಕ್ಷ್ಮಣ ಸವದಿ, ಉಡುಪಿಯ ನಯನಾ ಗಣೇಶ್ ನೇಮಕಗೊಳಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆದೇಶ ಹೊರಡಿಸಿದ್ದಾರೆ.
ಬಿಜೆಪಿ ರಾಜ್ಯ ಮುಖ್ಯ ವಕ್ತಾರರಾಗಿ ಎಂ.ಜಿ. ಮಹೇಶ್ ನೇಮಕಗೊಂಡಿದ್ದಾರೆ. ಬಿಜೆಪಿ ಅನಿವಾಸಿ ಭಾರತೀಯ ವಿಭಾಗದ ರಾಜ್ಯ ಸಂಚಾಲಕರಾಗಿ ಕ್ಯಾ. ಗಣೇಶ್ ಕಾರ್ಣಿಕ್, ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಹ ಸಂಯೋಜಕರಾಗಿ ಜಯತೀರ್ಥ ಕಟ್ಟಿ ನೇಮಕವಾಗಿದ್ದಾರೆ.
ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ಯೋಗೇಂದ್ರ, ಸಹ ಸಂಚಾಲಕರಾಗಿ ವಿನೋದ್ ಪಾಟೀಲ್, ರಾಜ್ಯ ಬಿಜೆಪಿ ಮೀನುಗಾರರ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ಗೋವಿಂದ ಬಾಂಡೇಕರ, ಸಹ ಸಂಚಾಲಕರಾಗಿ ನಾಗಪ್ಪ ಅಂಬಿ, ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ಶಾಸಕ ಬಸವರಾಜ ಮತ್ತಿಮೂಡ ಅವರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ಮಂಡ್ಯ ಜಿಲ್ಲಾ ಪ್ರಭಾರಿಯಾಗಿ ಜಗದೀಶ ಹಿರೇಮನಿ, ಯಾದಗಿರಿ ಜಿಲ್ಲಾ ಪ್ರಭಾರಿಯಾಗಿ ಅಮರನಾಥ ಪಾಟೀಲ್, ದಾವಣಗೆರೆ ಜಿಲ್ಲಾ ಪ್ರಭಾರಿಯಾಗಿ ಕೆ.ಶಿವಲಿಂಗಪ್ಪ, ಚಿತ್ರದುರ್ಗ ಜಿಲ್ಲಾ ಪ್ರಭಾರಿಯಾಗಿ ಸಿ.ಆರ್.ಪ್ರೇಮಕುಮಾರ್, ಬೆಂಗಳೂರು ಉತ್ತರ ಜಿಲ್ಲಾ ಪ್ರಭಾರಿಯಾಗಿ ಕೆ.ವಿ.ಶಿವಪ್ಪ ನೇಮಕವಾಗಿದ್ದಾರೆ.
ಬಿಜೆಪಿ ವಿಜಯನಗರ ಜಿಲ್ಲಾಧ್ಯಕ್ಷರಾಗಿ ಚನ್ನಬಸವನಗೌಡ, ಬಿಜೆಪಿ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಮುರಹರಗೌಡ ನೇಮಕಗೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಈ ಆದೇಶ ಹೊರಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳುತೆಲಂಗಾಣ: ಗುಂಡಿನ ಚಕಮಕಿ; ಆರು ಮಂದಿ ನಕ್ಸಲರ ಹತ್ಯೆ
ಮತಾಂತರದ ಬಗ್ಗೆ ಶೌರ್ಯದ ಮಾತಿನ ಬಳಿಕ ಹೇಳಿಕೆ ವಾಪಸ್ ಪಡೆದ ತೇಜಸ್ವಿ ಸೂರ್ಯ
ಬಾಲಕಿಯ ಮೇಲೆ 6 ಮಂದಿ ಅಪ್ರಾಪ್ತರಿಂದ ಸಾಮೂಹಿಕ ಅತ್ಯಾಚಾರ
ರಾಯಣ್ಣ ಪ್ರತಿಮೆ ಭಗ್ನ ಪ್ರಕರಣ: ಅಸಲಿ ಆರೋಪಿಗಳ ಸುಳಿವು ಪತ್ತೆ
ಭಾರೀ ಪ್ರವಾಹ:18 ಸಾವು, 280ಕ್ಕೂ ಹೆಚ್ಚು ಮಂದಿಗೆ ಗಾಯ; 35 ಸಾವಿರ ಜನರ ಸ್ಥಳಾಂತರ




























