ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಘೋಷಣೆ - Mahanayaka

ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಘೋಷಣೆ

08/02/2021


Provided by

ಬೆಂಗಳೂರು: ವಿಜಯನಗರವನ್ನು ರಾಜ್ಯದ 31ನೇ ಜಿಲ್ಲೆಯಾಗಿ ಅಧಿಕೃತವಾಗಿ ಘೋಷಿಸಲಾಗಿದ್ದು,  ಅಧಿಕೃತ ಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ.

2020ರ ಡಿಸೆಂಬರ್ 14ರಂದು ಕರಡು ಗೆಜೆಟ್ ಹೊರಡಿಸಿದ್ದ ಸರ್ಕಾರ, ಸಾರ್ವಜನಿಕ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಿತ್ತು. ಇದೀಗ ಹಲವು ಮಾರ್ಪಾಡುಗಳೊಂಡಿಗೆ ಅಧಿಕೃತ ಅಧಿಸೂಚನೆಯನ್ನು ಸರ್ಕಾರ ಹೊರಡಿಸಿದೆ.

ನೂತನ ವಿಜಯನಗರ ಜಿಲ್ಲೆಗೆ 6 ತಾಲೂಕುಗಳನ್ನು ರಚಿಸಲಾಗಿದೆ. ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ, ಹರಪನಹಳ್ಳಿಗಳನ್ನು ತಾಲೂಕುಗಳಾಗಿ ರಚಿಸಲಾಗಿದೆ.

ಇತ್ತೀಚಿನ ಸುದ್ದಿ