ರಾಜ್ಯದ ಎಲ್ಲ ನಗರಗಳಲ್ಲಿ "ನಮ್ಮ ಕ್ಲಿನಿಕ್ "ಸ್ಥಾಪನೆ ಸಿಎಂ ಬೊಮ್ಮಾಯಿ - Mahanayaka

ರಾಜ್ಯದ ಎಲ್ಲ ನಗರಗಳಲ್ಲಿ “ನಮ್ಮ ಕ್ಲಿನಿಕ್ “ಸ್ಥಾಪನೆ ಸಿಎಂ ಬೊಮ್ಮಾಯಿ

basavaraj bomayi
13/05/2022

ಬೆಂಗಳೂರು; ಆರೋಗ್ಯ ಕ್ಷೇತ್ರದಲ್ಲಿ ನರ್ಸಿಂಗ್ ವೃತ್ತಿಗೆ ಬಹಳ ಮಹತ್ವವಿದೆ. ಆಧುನಿಕ ವೈದ್ಯಕೀಯ ಉಪಕರಣಗಳ ಬಳಕೆ ಸೇರಿದಂತೆ ವೈದ್ಯಕೀಯ ಕ್ಷೇತ್ರದ ಎಲ್ಲ ಅರಿವು ಶುಶ್ರೂಷಕರಿಗೆ ಅವಶ್ಯಕವಿದೆ. ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಬೇಕು. ಉತ್ತಮ ಸೇವೆ ಸಲ್ಲಿಸಿದ ಶುಶ್ರೂಷಕರನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಂಗ್ಲೋ ಇಂಡಿಯನ್ ಯುನಿಟಿ ಸೆಂಟರ್ ಇವರ ಸಹಭಾಗಿತ್ವದಲ್ಲಿ ಅಂತರರಾಷ್ಟ್ರೀಯ ಶುಶ್ರೂಷಕರ ದಿನಾಚರಣೆ ಮತ್ತು 20ನೇ ಕರ್ನಾಟಕ ರಾಜ್ಯ ಮಟ್ಟದ ಫಾರೆನ್ಸ ನೈಟಿಂಗೇಲ್ ಶುಶ್ರೂಷ ಅಧಿಕಾರಿಗಳ ಪ್ರಶಸ್ತಿ 2020-2021 ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸರ್ಕಾರ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡಿದೆ. ಆರೋಗ್ಯ ಕ್ಷೇತ್ರದ ವಲಯವಾರು ಅಭಿವೃದ್ಧಿಗೆ 108 ತಾಲ್ಲೂಕುಗಳನ್ನು ಗುರುತಿಸಲಾಗಿದೆ. ಅವುಗಳಿಗೆ ಮೂಲಸೌಕರ್ಯ, ದಾದಿಯರು, ಲ್ಯಾಬ್ ಪರಿಣಿತರು, ವೈದರನ್ನು ಒದಗಿಸುವ ಮಹತ್ವದ ಕಾರ್ಯವನ್ನು ಮಾಡಲಾಗುತ್ತಿದೆ. ರಾಜ್ಯದ ಅಭಿವೃದ್ದಿಯಲ್ಲಿ ಆರೋಗ್ಯ ಮತ್ತು ಶಿಕ್ಷಣ ಪ್ರಮುಖವಾದ ಕ್ಷೇತ್ರಗಳು.

ಎಲ್ಲ ನಗರಗಳಲ್ಲಿ ‘ನಮ್ಮ ಕ್ಲೀನಿಕ್’ ಸ್ಥಾಪನೆ, 100 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೇಲ್ದರ್ಜೆ, 4 ಜಿಲ್ಲೆಗಳಲ್ಲಿ ಸಂಚಾರಿ ಆಸ್ಪತ್ರೆಗಳನ್ನ ನಿರ್ಮಿಸಲಾಗುತ್ತಿದೆ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳು, 4000 ವೈದ್ಯರು ಹಾಗೂ ನರ್ಸುಗಳ ನೇಮಕಾತಿ ಮಾಡಲಾಗಿದೆ. ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್ ಅಡಿ ಕೆಲಸ ಮಾಡುತ್ತಿರುವ ನರ್ಸುಗಳ ವೇತನದ ಪಾವತಿಯಲ್ಲಿನ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನಟಿ ಮತ್ತು ರೂಪದರ್ಶಿ ನಿಗೂಢ ಸ್ಥಿತಿಯಲ್ಲಿ ಸಾವು;  ಪತಿ ಬಂಧನ

ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಯಾವಾಗ?:  ದಿನಾಂಕ ಘೋಷಣೆ

ಉತ್ತರ ಪ್ರದೇಶದ ಮದ್ರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ!

ಋಷಿ ಕುಮಾರ ಸ್ವಾಮೀಜಿಗೆ ಮಸಿ ಬಳಿದ ಕಿಡಿಗೇಡಿಗಳು!

ನೋವಲ್ಲಿ ಧೈರ್ಯ ತುಂಬುವ, ಕಷ್ಟದಲ್ಲಿ ನೆರವಾಗುವ ದಾದಿಯರಿಗೆ ನಮನ

 

ಇತ್ತೀಚಿನ ಸುದ್ದಿ