10:43 PM Thursday 21 - August 2025

“ರಾಜ್ಯದ ಪ್ರತಿ ಬಿಪಿಎಲ್ ಕುಟುಂಬಕ್ಕೆ ತಿಂಗಳಿಗೆ 10 ಸಾವಿರ ಧನ ಸಹಾಯ ನೀಡಿ”

siddaramahia
09/05/2021

ಬೆಂಗಳೂರು: ಲಾಕ್ ಡೌನ್ ಜಾರಿಯ ಹಿನ್ನೆಲೆಯಲ್ಲಿ ದುಡಿಯುವ ವರ್ಗಕ್ಕೆ ನೆರವಾಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದು, ಬಿಪಿಎಲ್ ಕುಟುಂಬಕ್ಕೆ ತಿಂಗಳಿಗೆ 10 ಸಾವಿರ ಧನ ಸಹಾಯ ಹಾಗೂ ಪಡಿತರ ವಿತರಿಸಬೇಕು ಎಂದು ಪತ್ರ ಬರೆದಿದ್ದಾರೆ.

 ರಾಜ್ಯ ಸರ್ಕಾರ ತಿಂಗಳಿಗೆ ಸ್ಥಳ 10 ಕೆ.ಜಿ. ಅಕ್ಕಿ ಜೊತೆಗೆ ಬೇಳೆ, ಅಡುಗೆ ಎಣ್ಣೆ ಮುಂತಾದ ರೇಷನ್ ಕೊಡಬೇಕು. ಪ್ರತಿ ಬಿಪಿಎಲ್ ಕುಟುಂಬಕ್ಕೆ ಮೊದಲಿಗೆ 10,000 ರೂ., ನಂತರ ತಿಂಗಳಿಗೆ 6 ಸಾವಿರ ರೂಪಾಯಿ ನೀಡಬೇಕು. ಚಾಲಕರಾಗಿ ದುಡಿಯುವ ವರ್ಗಕ್ಕೆ 10 ಸಾವಿರ ರೂಪಾಯಿ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಇನ್ನೂ ಲಾಕ್ ಡೌನ್ ಸಂದರ್ಭದಲ್ಲಿ ಬಿಪಿಎಲ್ ಕುಟುಂಬಗಳಿಗೆ ಧನ ಸಹಾಯ ನೀಡಬೇಕು ಎಂದು ನಿನ್ನೆಯಷ್ಟೇ ಮಹಾನಾಯಕ ಡಾಟ್ ಇನ್ ವರದಿ ಮಾಡಿತ್ತು. ಇದರ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಈ ವಿಚಾರಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ನಮ್ಮಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಇಲ್ಲೇ ಬಳಸಿಕೊಳ್ಳಬೇಕು. ಜಿಲ್ಲಾವಾರು ಆಕ್ಸಿಜನ್ ಘಟಕಗಳನ್ನು ಸ್ಥಾಪನೆ ಮಾಡಬೇಕು. ಆಕ್ಸಿಜನ್ ಸಿಲಿಂಡರ್ ಮಾರಾಟ ದಂಧೆಗೆ ಕಡಿವಾಣ ಹಾಕಿ ಮನೆಯಲ್ಲಿ ಚಿಕಿತ್ಸೆ ಪಡೆಯುವವರಿಗೆ ಆಕ್ಸಿಜನ್ ಸಿಗುವಂತೆ ಮಾಡಬೇಕು. ಬೆಡ್ ಅಗತ್ಯತೆ ಬಗ್ಗೆ ಮೊದಲೇ ಕಾರ್ಯೋನ್ಮುಖವಾಗಬೇಕು. ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ನಿವೃತ್ತ ವೈದ್ಯರನ್ನು ಕೋವಿಡ್ ಚಿಕಿತ್ಸೆಗೆ ನಿಯೋಜಿಸಬೇಕು.  ಲಸಿಕೆ ಹಾಕಿಸಿಕೊಳ್ಳಲಾಗದವರಿಗೆ ಆದ್ಯತೆಯ ಮೇಲೆ ಲಸಿಕೆ ಹಾಕಬೇಕು. ಕಳೆದ ವರ್ಷ ಬಂದ ವೆಂಟಿಲೇಟರ್ ಧೂಳು ಹಿಡಿಯುತ್ತಿದ್ದು, ಅವುಗಳನ್ನು ಬಳಕೆ ಮಾಡಿಕೊಳ್ಳಬೇಕು. ಕಲ್ಯಾಣಮಂದಿರ, ಕ್ರೀಡಾಂಗಣ, ಹಾಸ್ಟೆಲ್ ಮೊದಲಾದವುಗಳನ್ನು ತಾತ್ಕಾಲಿಕ ಆಸ್ಪತ್ರೆ ಮಾಡಿ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ  ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

Exit mobile version