ರಾಜ್ಯದಲ್ಲಿ ಆಯಾ ಶಾಲೆಗಳಲ್ಲಿಯೇ ಮಕ್ಕಳಿಗೆ ಕೋವಿಡ್‌ ಲಸಿಕೆ: ಸಿಎಂ ಬಸವರಾಜ ಬೊಮ್ಮಾಯಿ - Mahanayaka
10:25 PM Thursday 16 - October 2025

ರಾಜ್ಯದಲ್ಲಿ ಆಯಾ ಶಾಲೆಗಳಲ್ಲಿಯೇ ಮಕ್ಕಳಿಗೆ ಕೋವಿಡ್‌ ಲಸಿಕೆ: ಸಿಎಂ ಬಸವರಾಜ ಬೊಮ್ಮಾಯಿ

basavaraj bommai
27/12/2021

ಬೆಂಗಳೂರು: ಕೇಂದ್ರ ಸರ್ಕಾರ ಜ. 3ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ರಾಜ್ಯದಲ್ಲಿ ಆಯಾ ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


Provided by

ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆಯಾ ಶಾಲೆಗಳಲ್ಲಿ ಲಸಿಕೆ ನೀಡುವ ಕುರಿತಂತೆ ಲಸಿಕಾ ಅಭಿಯಾನಗಳನ್ನು ಸಿದ್ಧಪಡಿಸುತ್ತಿದ್ದೇವೆ. 60 ವರ್ಷ ಮೇಲ್ಪಟ್ಟವರಿಗೆ ಸಹ-ಅಸ್ವಸ್ಥತೆ ಹೊಂದಿರುವವರಿಗೆ ‘ಮುನ್ನೆಚ್ಚರಿಕೆ ಡೋಸ್’ ನೀಡಲು ಸಿದ್ಧತೆ ನಡೆಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಶಾಲೆಗಳಲ್ಲಿ ಲಸಿಕೆ ಅಭಿಯಾನ ಜ. 3ರಿಂದ ಪ್ರಾರಂಭವಾಗಲಿದ್ದು, ಜನವರಿ 10 ರಿಂದ 60 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಸಹ-ಅಸ್ವಸ್ಥತೆಹೊಂದಿರುವ ಅರ್ಹರಿಗೆ ಇನ್ನೋಕ್ಯುಲೇಷನ್ ಶಿಬಿರಗಳು ಕೇಂದ್ರದ ನಿರ್ದೇಶನದಂತೆ ಪ್ರಾರಂಭವಾಗುತ್ತವೆ ಎಂದು ಹೇಳಿದರು.

ಇತ್ತ ಜನವರಿ 1, 2022ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡುವ ಸಂಬಂಧ ಕೋವಿನ್ ಆಯಪ್‌ನಲ್ಲಿ ನೋಂದಣಿ ಆರಂಭಗೊಳ್ಳಲಿದೆ. ಈ ಮೂಲಕ ಮಕ್ಕಳ ಪೋಷಕರು ಜ.1ರಿಂದ ಕೋವಿನ್ ಆಯಪ್‌ನಲ್ಲಿ ನೋಂದಾಯಿಸಿಕೊಳ್ಳಬಹುದು.

ಈ ಬಗ್ಗೆ ಕೋವಿನ್ ಪ್ಲಾಟ್ ಫಾರ್ಮ್ ಮುಖ್ಯಸ್ಥ ಡಾ.ಆರ್.ಎಸ್ ಶರ್ಮಾ ಅವರು, 15-18 ವರ್ಷ ವಯಸ್ಸಿನ ಮಕ್ಕಳು ಜ. 1ರಿಂದ ಕೋವಿನ್ ಆಯಪ್ ನಲ್ಲಿ ನೋಂದಾಯಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಶಾಲಾ ಗುರುತಿನ ಚೀಟಿಯೊಂದಿಗೆ ನೋಂದಣಿ ಮಾಡಬಹುದಾಗಿದೆ. ಇಲ್ಲವೇ ಆಧಾರ್ ಕಾರ್ಡ್ ಸಂಖ್ಯೆಯೊಂದಿಗೆಯೂ ನೋಂದಣಿ ಮಾಡಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಹಾತ್ಮ ಗಾಂಧಿಯವರ ಚಿಂತನೆ ಹಿಡಿದಿಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಲಕ್ಷ್ಮಣ ಸವದಿ, ಉಡುಪಿಯ ನಯನಾ ಗಣೇಶ್ ನೇಮಕ

ಮತಾಂತರದ ಬಗ್ಗೆ ಶೌರ್ಯದ ಮಾತಿನ ಬಳಿಕ ಹೇಳಿಕೆ ವಾಪಸ್ ಪಡೆದ ತೇಜಸ್ವಿ ಸೂರ್ಯ

ಬಾಲಕಿಯ ಮೇಲೆ 6 ಮಂದಿ ಅಪ್ರಾಪ್ತರಿಂದ ಸಾಮೂಹಿಕ ಅತ್ಯಾಚಾರ

ಮೇಲ್ಜಾತಿಯ ಮಹಿಳೆ ತಯಾರಿಸಿದ ಆಹಾರ ನಾವು ಸೇವಿಸುವುದಿಲ್ಲ | ದಲಿತ

ವಿದ್ಯಾರ್ಥಿಗಳಿಂದ ಪಟ್ಟು

 

ಇತ್ತೀಚಿನ ಸುದ್ದಿ