“ರಾಜ್ಯದಲ್ಲಿ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ”

congress
31/12/2021

ಬೆಂಗಳೂರು: ಜನರು ಬಿಜೆಪಿ ಆಡಳಿತದಿಂದ ರೋಸಿ ಹೋಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ  ಹೇಳಿದರು.

ಮಾಧ್ಯಮಗಳ ಜೊತೆಗೆ ಗುರುವಾರ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯ ಜನರ ತೀರ್ಪು ಹೊರ ಬಿದ್ದಿದೆ. ಚುನಾವಣೆ ನಡೆದ 1,187 ಸ್ಥಾನಗಳ ಪೈಕಿ 500ಕ್ಕೂ ಅಧಿಕ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. ಈ ಫಲಿತಾಂಶದಿಂದ ಜನಾಭಿಪ್ರಾಯವು ಕಾಂಗ್ರೆಸ್ ಪರವಾಗಿದೆ ಎಂಬುವುದು ಕಂಡು ಬರುತ್ತದೆ ಎಂದರು.

ಹಣ ಖರ್ಚು ಮಾಡಿ ಚುನಾವಣೆ ಗೆಲ್ಲುತ್ತೇವೆ ಎಂದು ಬಿಜೆಪಿಯವರು ಜಂಭದಿಂದ ವರ್ತಿಸುತ್ತಾರೆ. ಆದರೆ, ಹಣವೊಂದೇ ಚುನಾವಣೆ ಗೆಲ್ಲಲು ಸಾಕಾಗಲ್ಲ, ಜನಪರವಾಗಿ ಕೆಲಸ ಮಾಡಬೇಕು. ಪ್ರಾಮಾಣಿಕವಾದ ಆಡಳಿತ ನೀಡಬೇಕು. ಆಗ ಜನರು ಮತ ನೀಡುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಂಬೇಡ್ಕರ್, ಕುವೆಂಪು ವೃತ್ತ ವಿವಾದ: ಮೈಸೂರಿನ ಮಾತೃ ಮಂಡಳಿ ವೃತ್ತ ನೆಲಸಮ

ನಾಳೆ ಕರ್ನಾಟಕ ಬಂದ್ ಇದೆಯಾ?  | ಸಿಎಂ ಜೊತೆಗೆ ಕನ್ನಡ ಪರ ಸಂಘಟನೆ ಸಭೆ 

ಕಾಂಗ್ರೆಸ್ ಗೆ ಮದುವೆಯಾಗಿ 25 ವರ್ಷದ ಬಳಿಕ ಗಂಡು ಮಗು ಹುಟ್ಟಿದ ಸಂಭ್ರಮ | ಈಶ್ವರಪ್ಪ

ಸಿಎಂ ಬೊಮ್ಮಾಯಿ ತವರು ಜಿಲ್ಲೆಯಲ್ಲೇ ಬಿಜೆಪಿಗೆ ಮುಖಭಂಗ

ಅಪ್ಪೆ ಸಾಲೊದ ಪನ್ನಿ/ ಬಂಗಾಡಿಗೆ ಪ್ರಯಾಣ | ತುಳುನಾಡಿನ ಅವಳಿ ವೀರರು ಕಾನದ-ಕಟದರು | ಸಂಚಿಕೆ: 12

ಇತ್ತೀಚಿನ ಸುದ್ದಿ

Exit mobile version