ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇದೆಯಾ? | ಸಚಿವ ಸುಧಾಕರ್ ನೀಡಿದ ಖಡಕ್ ಎಚ್ಚರಿಕೆ ಏನು? - Mahanayaka
6:59 PM Wednesday 15 - October 2025

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇದೆಯಾ? | ಸಚಿವ ಸುಧಾಕರ್ ನೀಡಿದ ಖಡಕ್ ಎಚ್ಚರಿಕೆ ಏನು?

dr sudhakar
29/11/2021

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಲಾಕ್ ಡೌನ್ ಇರುವುದಿಲ್ಲ. ಲಾಕ್ ಡೌನ್ ವದಂತಿ ಹಬ್ಬಿಸಿದರೆ, ಅಂತಹವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಕೆ. ಖಡಕ್ ಎಚ್ಚರಿಕೆ ನೀಡಿದ್ದಾರೆ.


Provided by

ಒಮಿಕ್ರಾನ್ ಭೀತಿಯ ಹಿನ್ನೆಲೆಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಜಿನೋಮಿಕ್ ಸೀಕ್ವೆನ್ಸ್ ವರದಿ ಬರುವುದಕ್ಕೆ ಒಂದು ವಾರ ಬೇಕಾಗುತ್ತದೆ. ಡಿಸೆಂಬರ್ 1ರಂದು ನಮಗೆ ವರದಿ ಬರುತ್ತದೆ. ಈಗಾಗಲೇ 12 ದೇಶಗಳಲ್ಲಿ ಈ ವೈರಸ್ ಪತ್ತೆಯಾಗಿದೆ ಎಂದು ತಿಳಿಸಿದರು.

ಇನ್ನೂ ಅಂತಾರಾಷ್ಟ್ರೀಯ ವಿಮಾನಗಳ ಮೂಲಕ ರಾಜ್ಯಕ್ಕೆ ಪ್ರಯಾಣಿಕರು ಬರುತ್ತಿದ್ದಾರೆ. ಎಲ್ಲಾ ಪ್ರಯಾಣಿಕರನ್ನು ಕೂಡ  ಕೊವಿಡ್ ಪರೀಕ್ಷೆಗೊಳಪಡಿಸಲಾಗುತ್ತಿದೆ. 12ರಿಂದ 13ದಿನಗಳ ಹಿಂದೆ ಬಂದವರ ಮೇಲೆ ಕೂಡ ತೀವ್ರ ನಿಗಾ ಇಡಲಾಗಿದ್ದು, ಅವರ ಫೋನ್ ನಂಬರ್ ಗಳನ್ನು ಟ್ರೇಸ್ ಮಾಡಲಾಗುತ್ತಿದೆ ಎಂದು ಸುಧಾಕರ್ ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸರಿಗಮಪ ವೇದಿಕೆಗೆ ಬೇಗ ಬಂದು ಸೇರಿಕೊಳ್ಳುತ್ತೇನೆ | ಕನ್ನಡಿಗರಿಗೆ ಸಂತಸದ ಸುದ್ದಿ ನೀಡಿದ ಹಂಸಲೇಖ

ಚಿಕ್ಕಬಳ್ಳಾಪುರದಲ್ಲೊಂದು ವಿಶೇಷ ಮದುವೆ: ಗಮನ ಸೆಳೆದ ವಿಶೇಷ ಜೋಡಿ

ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭ: ಸರ್ಕಾರವನ್ನು ತರಾಟೆಗೆತ್ತಿಕೊಳ್ಳಲು ವಿಪಕ್ಷಗಳು ಸಜ್ಜು

“ನಾನು ಅಧಿಕಾರದಲ್ಲಿರಲು ಬಯಸುವುದಿಲ್ಲ” ಎಂದ ಪ್ರಧಾನಿ ನರೇಂದ್ರ ಮೋದಿ!

ABCD ಗೊತ್ತಿಲ್ಲದ ಇಬ್ಬರು ಇಂಗ್ಲಿಷ್ ಶಿಕ್ಷಕರ ಅಮಾನತು

ಇತ್ತೀಚಿನ ಸುದ್ದಿ