10:24 AM Wednesday 20 - August 2025

ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ | 6 ಜಿಲ್ಲೆಗಳಲ್ಲಿ ರೆಡ್ ಅಲಾರ್ಟ್ ಘೋಷಣೆ: ಶಾಲೆಗಳಿಗೆ ರಜೆ ಘೋಷಣೆ

heavy rain
19/11/2021

ಬೆಂಗಳೂರು:  ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ರಾಜ್ಯಾದ್ಯಂತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಗಳ ಪರಿಸ್ಥಿತಿ ನೋಡಿಕೊಂಡು ಶಾಲೆಗಳಿಗೆ ರಜೆ ನೀಡುವಂತೆ ಸರ್ಕಾರ ಆದೇಶ ನೀಡಿದೆ. ಹೀಗಾಗಿ ಶಾಲೆಗಳಿಗೆ ರಜೆ ಘೋಷಿಸುವ ಜವಾಬ್ದಾರಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಹೆಗಲಿಗೆ ವಹಿಸಲಾಗಿದೆ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ  ನವೆಂಬರ್ 23ರವರೆಗೆ ಭಾರಿ ಮಳೆ ನಿರೀಕ್ಷಿತ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯುವ ಭೀತಿ ಎದುರಾಗಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬೆಂಗಳೂರು: ನದಿಯಂತಾದ ರಸ್ತೆ, ವ್ಯಾಪಾರ ಕಳೆದುಕೊಂಡ ವ್ಯಾಪಾರಿಗಳು | ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ

ಹಂಸಲೇಖ ವಿರುದ್ಧ ದೂರು ನೀಡಿದ ವ್ಯಕ್ತಿಯ ವಿರುದ್ಧವೂ ದೂರು ದಾಖಲು

ಹೌದು ನಾನು ಕಿರುಚುವ ಬೊಬ್ಬೆ ಹೊಡೆಯುವ ‘ಕಲ್ಕಿಂಗ್ ಸ್ಟಾರ್’ | ಟೀಕಾಕಾರರಿಗೆ ದೀಪು ಶೆಟ್ಟಿಗಾರ್ ತಿರುಗೇಟು

ಉಪ್ಪಿಟ್ಟಿನಲ್ಲಿ ಹಾವಿನ ಮರಿ?: 50ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

ಏಷ್ಯಾ ಪೆಸಿಫಿಕ್‌ ರಾಷ್ಟ್ರಗಳಲ್ಲಿ ಅತ್ಯಂತ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಡಿಜಿಟಲ್ ಬ್ರಾಂಡ್‌ ಗಳಲ್ಲಿ ಪ್ರಮುಖ ಸ್ಥಾನ ಪಡೆದ ‘ಕೂ’ ಅಪ್ಲಿಕೇಶನ್

ಕಾಲುಂಗುರ, ಕಾಲ್ಗೆಜ್ಜೆ ಕಳವು ಮಾಡಲು ಮಹಿಳೆಯ ಪಾದವನ್ನೇ ಕತ್ತರಿಸಿದ ದರೋಡೆಕೋರರು!

ಇತ್ತೀಚಿನ ಸುದ್ದಿ

Exit mobile version