6:11 PM Thursday 29 - January 2026

“ರಾಜ್ಯಕ್ಕೆ ಬೇಕಿರೋದು ನೆರವಿನ ಹಸ್ತ, ಉಪದೇಶದ ಬುರುಡೆ ಮಾತಲ್ಲ”

siddaramahia
21/04/2021

ಬೆಂಗಳೂರು: ಕೊರೋನಾ ಸೋಂಕಿನಿಂದ ತತ್ತರಿಸಿಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ಟೀಕಿಸಿದ್ದಾರೆ.

 

ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಮ್ಲಜನಕವಿಲ್ಲದೆ, ಐಸಿಯು ಹಾಸಿಗಳಿಲ್ಲದೇ, ಪ್ರಾಣ ರಕ್ಷಕ ಔಷಧ ರೆಮ್ ಡೆಸಿವಿರ್ ಸಿಗದೇ ಜೀವ ಕಳೆದುಕೊಳ್ಳುತ್ತಿದ್ದಾರೆ. ಈ ಸಮಸ್ಯೆಗಳಿಗೆ ಯಾವುದೇ ಪರಿಹಾರ ನೀಡದ ನರೇಂದ್ರ ಮೋದಿ ಜನತೆಗೆ ಜವಾಬ್ದಾರಿಯ ಪಾಠ ಹೇಳಿದ್ದಾರೆ. ಪ್ರಧಾನಿಗಳೇ ಮೊದಲು ನಿಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿ ಎಂದು ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

 

ಕೊರೋನಾ ಕಾರಣದಿಂದಾಗಿ ಲಾಕ್ ಡೌನ್ ಅನಿವಾರ್ಯ ಎಂಬಂತೆ ರಾಜ್ಯ ಬಿಜೆಪಿ ಸರ್ಕಾರ ಮಾತನಾಡುತ್ತಿದೆ. ಲಾಕ್ಡೌನ್ ಹೇರಿದರೆ ಕಷ್ಟ-ನಷ್ಟಕ್ಕೀಡಾಗುವ ಜನತೆಗೆ ಕೇಂದ್ರ ಬಿಜೆಪಿ ಸರ್ಕಾರ ನೀಡುವ ನೆರವಿನ ಘೋಷಣೆಯನ್ನು ಜನ ನಿರೀಕ್ಷಿಸಿದ್ದರು. ಮೋದಿ ಭಾಷಣ ನಿಮ್ಮ ತಲೆ ಮೇಲೆ ನಿಮ್ಮ ಕೈ ಎಂಬ ಸಂದೇಶ ನೀಡಿದೆ ಎಂದು ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

 

ಇತ್ತೀಚಿನ ಸುದ್ದಿ

Exit mobile version