ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜೊತೆಗೆ ಆಗಮಿಸಿದ ಶೋಭಾ ಕರಂದಾಜ್ಲೆ - Mahanayaka

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜೊತೆಗೆ ಆಗಮಿಸಿದ ಶೋಭಾ ಕರಂದಾಜ್ಲೆ

shobha karanlaje
25/08/2022


Provided by

ಮಂಗಳೂರು: ರಾಜ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ ಇಂದು ಬೆಳಗ್ಗೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.


Provided by

ಕೇಂದ್ರ ಸಚಿವರಾದ ಶೋಭಾ ಕರಂದಾಜ್ಲೆ ಅವರು ಈ ವೇಳೆ ರಾಜ್ಯಪಾಲರೊಂದಿಗೆ ಆಗಮಿಸಿದರು. ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್,  ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಸ್ವಾಗತಿಸಿದರು.

ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ನಂತರ ರಾಜ್ಯಪಾಲರು ರಸ್ತೆ ಮಾರ್ಗವಾಗಿ ಉಡುಪಿಗೆ ತೆರಳಿದರು.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ