ದಕ್ಷಿಣ ಕನ್ನಡ –ಉಡುಪಿ ಜಿಲ್ಲೆಯಲ್ಲಿ ಗುರುವಾರದಿಂದ ರಮಝಾನ್ ಉಪವಾಸ ಆರಂಭ

ramadan fasting
17/02/2026

ಮಂಗಳೂರು/ಉಡುಪಿ: ಪವಿತ್ರ ರಮಝಾನ್ ಮಾಸದ ಪ್ರಥಮ ಚಂದ್ರದರ್ಶನವು ಮಂಗಳವಾರ ಕಂಡುಬರದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಫೆಬ್ರವರಿ 19, ಗುರುವಾರದಿಂದ ರಮಝಾನ್ ಉಪವಾಸ ಆಚರಣೆ ಆರಂಭವಾಗಲಿದೆ ಎಂದು ಧಾರ್ಮಿಕ ಮುಖಂಡರು ಘೋಷಿಸಿದ್ದಾರೆ.

ಮಂಗಳೂರು:

ಮಂಗಳವಾರ ಸಂಜೆ ಚಂದ್ರದರ್ಶನವಾದ ಬಗ್ಗೆ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಗುರುವಾರದಿಂದ ಉಪವಾಸ ವ್ರತ ಆರಂಭಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರು ನಿರ್ದೇಶನ ನೀಡಿದ್ದಾರೆ. ಈ ಕುರಿತು ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ. ರಶೀದ್ ಹಾಜಿ ಮಾಹಿತಿ ನೀಡಿದ್ದಾರೆ.

ಉಡುಪಿ:

ಅದೇ ರೀತಿ ಉಡುಪಿ ಜಿಲ್ಲೆಯಲ್ಲೂ ಚಂದ್ರದರ್ಶನವಾಗದ ಕಾರಣ ಗುರುವಾರದಿಂದಲೇ ರಮಝಾನ್ ಆರಂಭವಾಗಲಿದೆ ಎಂದು ಉಡುಪಿ, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸಂಯುಕ್ತ ಖಾಝಿ ಝೈನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ತಿಳಿಸಿದ್ದಾರೆ.

ಈ ಘೋಷಣೆಯೊಂದಿಗೆ ಕರಾವಳಿ ಜಿಲ್ಲೆಗಳಲ್ಲಿ ಪವಿತ್ರ ರಮಝಾನ್ ಮಾಸದ ಧಾರ್ಮಿಕ ವಿಧಿವಿಧಾನಗಳಿಗೆ ಚಾಲನೆ ಸಿಕ್ಕಂತಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version