ಡಿ.ಕೆ.ಶಿವಕುಮಾರ್ ಗೆ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಭಾರಿ ಸಂಚಲನ ಸೃಷ್ಟಿಯಾಗಿದ್ದು, ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಬಿ.ಟಿ.ಎಂ. ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇಂದು ಪತ್ರಿಕಾಗೋಷ್ಠಿ ಕರೆದ ರಾಮಲಿಂಗಾರೆಡ್ಡಿ ತಮ್ಮ ರಾಜೀನಾಮೆ ಪತ್ರವನ್ನು ಬಹಿರಂಗಪಡಿಸಿದ್ದಾರೆ. ಸಚಿವ ಸ್ಥಾನ ತೊರೆಯುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

“ನನಗೆ ತಮ್ಮ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದ್ದಕ್ಕೆ ತಮಗೂ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ನನ್ನ ಧನ್ಯವಾದಗಳು. ನಾನು ನನ್ನ ಆತ್ಮಸಾಕ್ಷಿ ವಿರುದ್ಧವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕೆಂದು ಕೋರುತ್ತೇನೆ. ನಾನು ಶಾಸಕನಾಗಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ” ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
2023ರಲ್ಲಿ ಸಿದ್ದರಾಮಯ್ಯ ಸಂಪುಟ ರಚನೆ ವೇಳೆ ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ಡಿಕೆಶಿ ಹಾಗೂ ಭೈರತಿ ಸುರೇಶ್ ಭರವಸೆ ನೀಡಿದ್ದರು. ಆದರೆ ಸಾರಿಗೆ ಖಾತೆ ನೀಡಲಾಯಿತು. ಆಗ ನಾನು ಬೇಸರಗೊಂಡಾಗ, ಮುಂದೆ ತಾವೇ ಸಿಎಂ ಆದಾಗ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನೇ ಕೊಡುವುದಾಗಿ ಡಿಕೆಶಿ ನನ್ನ ಕೋರಮಂಗಲದ ನಿವಾಸಕ್ಕೆ ಬಂತು ಮಾತು ಕೊಟ್ಟಿದ್ದರು. ಆದರೆ ಈಗ ಸಿಎಂ ಆದ ಬೆನ್ನಲ್ಲೇ ಜಲಸಂಪನ್ಮೂಲ ಖಾತೆ ನೀಡಿದ್ದಾರೆ. ಇದಕ್ಕೆ ನನ್ನ ಮನಸ್ಸು ಒಪ್ಪುತ್ತಿಲ್ಲಎಂದು ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























