ವಿಕಲಚೇತನ ಬಾಲಕಿಯ ಬರ್ಬರ ಹತ್ಯೆ, ಅತ್ಯಾಚಾರದ ಶಂಕೆ

ರಾಮನಗರ: ವಿಕಲಚೇತನ ಬಾಲಕಿಯ ಮೃತದೇಹ ರಾಮನಗರ ತಾಲೂಕಿನ ಭದ್ರಾಪುರ ಗ್ರಾಮದ ಸಮೀಪದ ರೈಲು ಹಳಿಯ ಬಳಿ ಪತ್ತೆಯಾಗಿದ್ದು, ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಹತ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ರಾಮನಗರ ತಾಲೂಕಿನ ಭದ್ರಾಪುರ ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯ ವಿಕಲಚೇತನ ಬಾಲಕಿ ಖುಷಿ (14) ನಾಪತ್ತೆಯಾಗಿದ್ದಳು. ಸೋಮವಾರ ಮೇ 12ರಂದು ಆಕೆಯ ಮೃತದೇಹ ಭದ್ರಾಪುರ ಗ್ರಾಮದ ರೈಲು ಹಳಿ ಬಳಿಯಲ್ಲಿ ಪತ್ತೆಯಾಗಿತ್ತು.
ಘಟನೆ ಸಂಬಂಧ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಈ ನಡುವೆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ನಡೆಸಲಾಗಿದೆ ಎಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.
ಪೊಲೀಸರು ಕೆಲ ಸಾಕ್ಷ್ಯಗಳನ್ನ ಎಫ್ ಎಸ್ ಎಲ್ ಗೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ. ಅಲ್ಲದೆ, ಕೆಲವು ಸಂಶಯಾಸ್ಪದ ವ್ಯಕ್ತಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಘಟನೆಯ ವಿಷಯ ತಿಳಿದು ಗ್ರಾಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ನೊಂದ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಅಲ್ಲದೇ ಕುಟುಂಬಸ್ಥರಿಗೆ ಪರಿಹಾರ ವಿತರಣೆ ಮಾಡಿದರು. ಅಲ್ಲದೇ ಬಾಲಕಿಯ ಸಾವಿಗೆ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: