ರಮೇಶ್ ಜಾರಕಿಹೊಳಿ ಬೆಂಬಲಿಗನಿಂದ ಆತ್ಮಹತ್ಯೆಗೆ ಯತ್ನ! | ಕಾರಣ ಏನು ಗೊತ್ತಾ?
03/03/2021
ಬೆಳಗಾವಿ: ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಅಂಗೀಕಾರ ಮಾಡಬಾರದು ಎಂದು ಒತ್ತಾಯಿಸಿ ರಮೇಶ್ ಜಾರಕಿಹೊಳಿ ಬೆಂಬಲಿಗನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ.
ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸ ಬಾರದು ಎಂದು ಒತ್ತಾಯಿಸಿ ಗೋಕಾಕ್ ನಲ್ಲಿ ಬೀದಿಗಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಬೆಂಬಲಿಗನೋರ್ವ ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಕಾರ್ಯಕರ್ತನನ್ನು ಗಮನಿಸಿದ ಪೊಲೀಸರು ತಕ್ಷಣ ರಕ್ಷಿಸಿದ್ದಾರೆ. ಅಲ್ಲದೇ ಪ್ರತಿಭಟನೆ ನಡೆಸುತ್ತಿದ್ದ ರಮೇಶ್ ಜಾರಕಿಹೊಳಿ ಬೆಂಬಲಿಗರನ್ನು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಕಾರ್ಯಕರ್ತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.
























