ರಮೇಶ್ ಜಾರಕಿಹೊಳಿಯೇ ಸಿಡಿ ಬಿಡುಗಡೆ ಮಾಡಿಸಿದ್ದಾರೆ ಎಂದ ಸಂತ್ರಸ್ತೆ! - Mahanayaka

ರಮೇಶ್ ಜಾರಕಿಹೊಳಿಯೇ ಸಿಡಿ ಬಿಡುಗಡೆ ಮಾಡಿಸಿದ್ದಾರೆ ಎಂದ ಸಂತ್ರಸ್ತೆ!

13/03/2021

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ವಿಚಾರವಾಗಿ ಯುವತಿ ಇಂದು ಬಿಡುಗಡೆ ಮಾಡಿರುವ ವಿಡಿಯೋ ಬಗ್ಗೆ ಇನ್ನಷ್ಟು ಮಾಹಿತಿಗಳು ಲಭಿಸಿದ್ದು, ರಮೇಶ್ ಜಾರಕಿಹೊಳಿಯೇ ಈ ವಿಡಿಯೋವನ್ನು ಬಿಡುಗಡೆ ಮಾಡಿಸಿದ್ದಾರೆ ಎಂದು  ಯುವತಿ ಆರೋಪಿಸಿದ್ದಾಳೆ.


Provided by
Provided by
Provided by
Provided by
Provided by
Provided by
Provided by

ಈ ವಿಡಿಯೋವನ್ನು ಯಾರು ಮಾಡಿದ್ದಾರೆ ಎನ್ನುವುದು ತನಗೆ ಗೊತ್ತಿಲ್ಲ. ಈ ಬಗ್ಗೆ ನಾನು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡುತ್ತೇನೆ. ನನಗೆ ಹಾಗೂ ನನ್ನ ಕುಟುಂಬಸ್ಥರಿಗೆ ರಕ್ಷಣೆ ನೀಡುವಂತೆ ಮನವಿ ಮಾಡುತ್ತೇನೆ ಎಂದು ಯುವತಿ ವಿಡಿಯೋದಲ್ಲಿ ಹೇಳಿದ್ದಾಳೆ.

ನನಗೆ ಕೆಲಸ ಕೊಡಿಸುವುದಾಗಿ ಹೇಳಿದ್ದ ರಮೇಶ್ ಜಾರಕಿಹೊಳಿ ಇದೀಗ ಸಿಡಿಯನ್ನು ಹರಿಬಿಟ್ಟಿದ್ದಾರೆ. ಜನರು ನನ್ನ ಮನೆಯ ಬಳಿ ಬಂದು ಇದರ ಬಗ್ಗೆ ಕೇಳುಕೊಂಡು ಹೋಗುತ್ತಿದ್ದಾರೆ ಎಂದು ಯುವತಿ ವಿಡಿಯೋದಲ್ಲಿ ಆರೋಪಿಸಿದ್ದಾಳೆ.

ಇತ್ತೀಚಿನ ಸುದ್ದಿ