ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಇಬ್ಬರು ಆರೋಪಿಗಳ ಬಂಧನ | ಬಂಧಿತರು ಯಾರು ಗೊತ್ತಾ? - Mahanayaka
8:32 AM Wednesday 17 - September 2025

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಇಬ್ಬರು ಆರೋಪಿಗಳ ಬಂಧನ | ಬಂಧಿತರು ಯಾರು ಗೊತ್ತಾ?

12/03/2021

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ  ವಿಶೇಷ ತನಿಖಾ ತಂಡ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.


Provided by

ಬೆಂಗಳೂರಿನ ಯಶವಂತಪುರದಲ್ಲಿ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ,  ಈತನ ವಿಚಾರಣೆಯ ಬಳಿಕ ಈತನ ಸ್ನೇಹಿತೆಯನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಈ ವ್ಯಕ್ತಿಗೆ ಮತ್ತು ರಮೇಶ್ ಜಾರಕಿಹೊಳಿ ಸಿಡಿಯಲ್ಲಿದ್ದ ಯುವತಿಗೆ  ಉತ್ತಮ ಸಂಬಂಧವಿತ್ತು ಎಂದು ಹೇಳಲಾಗಿದೆ.

ಇದೇ ವ್ಯಕ್ತಿ ಸಿಡಿಯನ್ನು ದಿನೇಶ್ ಕಲ್ಲಹಳ್ಳಿಗೆ ನೀಡಿದ್ದಾನೆ ಎಂದು ಹೇಳಲಾಗಿದೆ. ಸಿಡಿ ವಿಚಾರವಾಗಿ ತನಿಖೆ ಚುರುಕುಗೊಳಿಸಿರುವ ಪೊಲೀಸರು ಇದೀಗ ಸಿಡಿಯ ಮೂಲದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಬಂಧಿತರ ವಿಚಾರಣೆಯ ಬಳಿಕ ಈ ಪ್ರಕರಣದಲ್ಲಿ ಇನ್ನಷ್ಟು ಮಾಹಿತಿ ದೊರೆಯಬಹುದು.

ಸಿಡಿ ಬಿಡುಗಡೆ ಮಾಡಿದ್ದ ದಿನೇಶ್ ಕಲ್ಲಹಳ್ಳಿಯನ್ನು ಹೊರಗಡೆ ಬಿಟ್ಟು ಸಿಡಿ ಮಾಡಿದವರ ಮೂಲವನ್ನು ಪೊಲೀಸರು ಶೋಧಿಸುತ್ತಿದ್ದಾರೆ. ದಿನೇಶ್ ಕಲ್ಲಹಳ್ಳಿ ವಿರುದ್ಧ ಪೊಲೀಸರು ಯಾಕೆ ಕ್ರಮಕೈಗೊಂಡಿಲ್ಲ ಎನ್ನುವ ಪ್ರಶ್ನೆಗಳು ಇದೀಗ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

ಇನ್ನೂ ಈ ಸಿಡಿಯನ್ನು ತನ್ನ ಹೆಸರು ಕೆಡಿಸಲು ಬಿಡುಗಡೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾದ ಎಲ್ಲರನ್ನೂ ಜೈಲಿಗೆ ಕಳುಹಿಸುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಯಶವಂತಪುರ ಅಪಾರ್ಟ್ ಮೆಂಟ್ ಮತ್ತು ಹುಳಿಮಾವಿನಲ್ಲಿ ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ರಮೇಶ್ ಜಾರಕಿಹೊಳಿ ಪ್ರತಿಜ್ಞೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ