1:10 AM Wednesday 27 - August 2025

ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ

basavaraj bommai
23/03/2023

ಬೆಂಗಳೂರು: ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮೀಸಲಾತಿಗೆ ಸಂಬಂಧಿಸಿದಂತೆ ಇತಿಹಾಸವನ್ನು ಓದಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿರುವ ಬಗ್ಗೆ ಗೃಹ ಕಚೇರಿ ಕೃಷ್ಣ ದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಮೀಸಲಾತಿ ಬಗ್ಗೆ ಕಾಂಗ್ರೆಸ್ ಗೆ ಮಾತನಾಡುವ ನೈತಿಕ ಹಾಗೂ ರಾಜಕೀಯ ಅಧಿಕಾರವಿಲ್ಲ ಎಂದರು.

ಶೆಡ್ಯೂಲ್ 9 ಕ್ಕೆ ಸೇರಿಸಲು ಬದ್ಧತೆ:
ಈಗಾಗಲೇ ಮೀಸಲಾತಿಗೆ ಕಾನೂನು ರಚಿಸಿದ್ದು, ಆ ಪ್ರಕಾರ ನೇಮಕಾತಿ ಹಾಗೂ ಬಡ್ತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಸಂವಿಧಾನದ ಶೆಡ್ಯೂಲ್ 9 ಕ್ಕೆ ಸೇರಿಸಲು ಸಚಿವ ಸಂಪುಟದ ಅನುಮೋದನೆಯಾಗಿದ್ದು, ರಾಜ್ಯಪಾಲರಿಗೆ ಕಳುಹಿಸಲಾಗಿದೆ. ಕಾನೂನು ಇಲಾಖೆ ಸಲಹೆ ಪಡೆದು ಪ್ರಕ್ರಿಯೆ ಜಾರಿಗೊಳಿಸಿದೆ. ಶೆಡ್ಯೂಲ್ 9 ಗೆ ಸೇರ್ಪಡೆ ಮಾಡುವ ಬದ್ಧತೆ ಸರ್ಕಾರಕ್ಕಿದೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version