11:42 AM Wednesday 27 - August 2025

ಯುವ ಕಾಂಗ್ರೆಸ್ ಚುನಾವಣೆ –2024: ಸುಳ್ಯ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ರಂಜೀತ್ ರೈ ನಾಮಪತ್ರ

ranjith rai menala
21/08/2024

ಸುಳ್ಯ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಚುನಾವಣೆ –2024ಯಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ರಂಜೀತ್ ರೈ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ರಂಜೀತ್ ರೈ ಮೇನಾಲ ಅವರು,  ಮೇನಾಲ ಮನೆತನದ ಕಿರಿಯ ವ್ಯಕ್ತಿಯಾಗಿದ್ದಾರೆ. ಮೂಲತಃ  ಮೇನಾಲ ಕುಟುಂಬದ ಹಿರಿಯ ರಾಜಕಾರಣಿ ಕಾಂಗ್ರೆಸ್ ದುರಿಣ ದಿ.ಸುಧೀರ್ ರೈ ಮೇನಾಲರವರ   ಗರಿಡಿಯಲ್ಲಿ ಬೆಳೆದು, ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಸಾದ್ ರೈ ಮೇನಾಲರವರ ಮಾರ್ಗದರ್ಶನದಲ್ಲಿ  ಅನೇಕ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದವರು.

ಇದೀಗ ದಕ್ಷಿಣಕನ್ನಡ ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಜಿಲ್ಲಾ ಸದಸ್ಯರಾಗಿ ಸ್ಥಳೀಯ ಯುವಕ ಮಂಡಲದ ಅಧ್ಯಕ್ಷರಾಗಿ ಮೇನಾಲ ಶಾಲಾ ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾಗಿ ಇವರನ್ನು ಪಕ್ಷವು ಗುರುತಿಸಿ ಪ್ರದೇಶ ಯುವ ಕಾಂಗ್ರೆಸ್ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ.

ಇವರನ್ನು ಹೆಚ್ಚುಮತಗಳ ಅಂತರದಲ್ಲಿ ಗೆಲ್ಲಿಸಿಕೊಡಬೇಕಾಗಿ ಬೆಂಬಲಿಗರು ಮನವಿ ಮಾಡಿಕೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version