ರನ್ಯಾ ರಾವ್ ಪ್ರಕರಣ: ಗೋಲ್ಡ್ ಸ್ಮಗ್ಲಿಂಗ್ ನಲ್ಲಿ ಹೊರ ಬರುತ್ತಾ ಪ್ರಭಾವಿ ರಾಜಕಾರಣಿಗಳ ಹೆಸರು? - Mahanayaka

ರನ್ಯಾ ರಾವ್ ಪ್ರಕರಣ: ಗೋಲ್ಡ್ ಸ್ಮಗ್ಲಿಂಗ್ ನಲ್ಲಿ ಹೊರ ಬರುತ್ತಾ ಪ್ರಭಾವಿ ರಾಜಕಾರಣಿಗಳ ಹೆಸರು?

ranya rao
09/03/2025

ಬೆಂಗಳೂರು: ಕನ್ನಡ ನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸಿಲುಕಿದ್ದಾರೆ. ಇದೀಗ ಈ ಪ್ರಕರಣದಲ್ಲಿ ಪ್ರಮುಖ ರಾಜಕಾರಣಿಯೊಬ್ಬರು ಶಾಮೀಲಾಗಿದ್ದಾರೆ ಎನ್ನುವ ವಿಚಾರಗಳು ವರದಿಗಳಿಂದ ತಿಳಿದು ಬಂದಿದೆ.


Provided by

ಗೋಲ್ಡ್ ಸ್ಮಗ್ಲಿಂಗ್  ಪ್ರಕರಣವನ್ನು ಡಿಆರ್ ಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಈ ಕೃತ್ಯದ ಹಿಂದೆ ಹಲವು ಪ್ರಭಾವಿಗಳಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ ಎನ್ನಲಾಗುತ್ತಿದೆ.

ನಟಿ ರನ್ಯಾ ರಾವ್‌ಗೆ ಹಲವು ರಾಜಕೀಯ ನಾಯಕರ ಜೊತೆ ಸಂಪರ್ಕ ಇದೆ ಎನ್ನಲಾಗಿದೆ. ಅದರಲ್ಲೂ ಕಾಂಗ್ರೆಸ್ ಸರ್ಕಾರದ ಪ್ರಭಾವಿ ರಾಜಕಾರಣಿಯ ಹೆಸರು ಇದರಲ್ಲಿ ಕೇಳಿ ಬಂದಿದೆ ಎಂದು ಹೇಳಲಾಗಿದೆ.


Provided by

ರನ್ಯಾ ರಾವ್ ಬಂಧನವಾಗುತ್ತಿದ್ದಂತೆ ಪ್ರಭಾವಿ ಸಚಿವರು ಈ ಕೇಸ್‌ ಅನ್ನು ಮ್ಯಾನೇಜ್ ಮಾಡಲು ಕಸರತ್ತು ಮಾಡಿದ್ದಾರೆ. ಆದರೆ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ