ಪೊಲೀಸ್ ಕಸ್ಟಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಅತ್ಯಾಚಾರ ಆರೋಪಿ

ಅತ್ಯಾಚಾರದ ಆರೋಪಿ 22 ವರ್ಷದ ಯುವಕನೊಬ್ಬ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಪೊಲೀಸ್ ಕ್ವಾರ್ಟಸ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಗೌತಮ್ ಬುದ್ಧ ನಗರ ಜಿಲ್ಲೆಯ ಬಿಸ್ರಾಖ್ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುವ ಚಿಪಿಯಾನಾ ಬುಜುರ್ಗ್ ಪೋಸ್ಟ್ ನಿಂದ ಈ ಘಟನೆ ವರದಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್ ಆಯುಕ್ತ ಲಕ್ಷ್ಮಿ ಸಿಂಗ್ ಅವರ ಆದೇಶದ ಮೇರೆಗೆ ನಿರ್ಲಕ್ಷ್ಯ ವಹಿಸಿದ ಸಿಬ್ಬಂದಿಯಾನ್ನು ಅಮಾನತುಗೊಳಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ವಲಯ -2) ಸುನೀತಿ ತಿಳಿಸಿದ್ದಾರೆ. ಆಯುಕ್ತರು ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಎಂದು ಅವರು ಹೇಳಿದರು.
ಪೊಲೀಸ್ ಠಾಣೆಯ ಉಸ್ತುವಾರಿ ಮತ್ತು ಸಹಾಯಕ ಪೊಲೀಸ್ ಆಯುಕ್ತರ ವಿರುದ್ಧವೂ ತನಿಖೆ ಆರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ವೈದ್ಯರ ಸಮಿತಿಯು ಮರಣೋತ್ತರ ಪರೀಕ್ಷೆ ನಡೆಸಿದೆ ಮತ್ತು ಅದನ್ನು ವೀಡಿಯೊಗ್ರಾಫ್ ಮಾಡಲಾಗಿದೆ ಎಂದು ಸುನೀತಿ ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth