‘ಕುಲದಲ್ಲಿ ಕೀಳ್ಯಾವುದೋ’ಸಿನಿಮಾದ ನಾಯಕ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ - Mahanayaka
10:52 PM Friday 12 - December 2025

‘ಕುಲದಲ್ಲಿ ಕೀಳ್ಯಾವುದೋ’ಸಿನಿಮಾದ ನಾಯಕ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ

madenur manu
22/05/2025

ಕಾಮಿಡಿ ಕಿಲಾಡಿಗಳು ಶೋ ಮೂಲಕ ಖ್ಯಾತಿ ಪಡೆದಿದ್ದ ಮಡೆನೂರು ಮನು ವಿರುದ್ಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಆರೋಪದ ಮೇಲೆ ಎಫ್​ ಐಆರ್​ ದಾಖಲಾಗಿದೆ.

ಕಿರುತೆರೆ ನಟಿಯೊಬ್ಬರು ನೀಡಿರುವ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮಡೆನೂರು ಮನುವಿನ ಬಂಧನಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಮಡೆನೂರು ಮನು ನಾಯಕ ನಟನಾಗಿ ಅಭಿನಯಿಸಿದ ‘ಕುಲದಲ್ಲಿ ಕೀಳ್ಯಾವುದೋ’ಸಿನಿಮಾ ರಿಲೀಸ್ ಸಮಯದಲ್ಲೇ  ಈ ರೀತಿಯ  ಆರೋಪ ಕೇಳಿ ಬಂದಿದ್ದು, ಇದು ಚಿತ್ರದ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನಲಾಗಿದೆ.

ಚಿತ್ರರಂಗದಲ್ಲಿ ಕೆಲಸ ಮಾಡುವಾಗ ಮಡೆನೂರು ಮನುಗೆ ಕಿರುತೆರೆ ನಟಿ ಪರಿಚಯ ಆಗಿದೆ. ಆ ಬಳಿಕ ಇವರ ಮಧ್ಯೆ ಗೆಳೆತನ ಬೆಳೆದಿದೆ. ಈಗ ‘ನನ್ನ ಮೇಲೆ ಮನು ಅತ್ಯಾಚಾರ ಮಾಡಿದ್ದಾನೆ’ ಎಂದು ನಟಿ ದೂರು ನೀಡಿದ್ದಾರೆ. ಅತ್ಯಾಚಾರ, ಗರ್ಭಪಾತ ಸೇರಿದಂತೆ ಹಲವು ಆರೋಪಗಳನ್ನು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂತಸ್ತೆಗೆ ಮನು ನಾಗರಭಾವಿಯಲ್ಲಿ ಬಾಡಿಗೆ ಮನೆ ಹುಡುಕಿಕೊಟ್ಟಿದ್ದ. 2018ರಿಂದಲೂ ಮನುವಿನ ಪರಿಚಯ ಸಂತ್ರಸ್ತೆಗೆ ಇತ್ತು. ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದಲ್ಲಿ ಇಬ್ಬರೂ ಜೊತೆಯಾಗಿ ಕೆಲಸ ಮಾಡಿದ್ದರು. ಮೊದಲಿಗೆ ಪರಿಚಯ ಆಗಿ ಸ್ನೇಹ ಬೆಳೆದಿತ್ತು. ಮನುಗೆ ಮದುವೆ ಆಗಿ ಒಂದು ಮಗು ಕೂಡ ಇದೆ ಎನ್ನುವ ವಿಚಾರ ಈ ದೂರಿನಿಂದ ಬಯಲಾಗಿದೆ.  ಸದ್ಯ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಂದ ಮನುಗಾಗಿ ಹುಡುಕಾಟ ನಡೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ