ಡೇಟಿಂಗ್ ಆ್ಯಪ್ ನಲ್ಲಿ ಪರಿಚಯವಾದ ಯುವಕನಿಂದ ಅತ್ಯಾಚಾರ: ಯುವತಿಯಿಂದ ದೂರು - Mahanayaka

ಡೇಟಿಂಗ್ ಆ್ಯಪ್ ನಲ್ಲಿ ಪರಿಚಯವಾದ ಯುವಕನಿಂದ ಅತ್ಯಾಚಾರ: ಯುವತಿಯಿಂದ ದೂರು

madivala police station
17/11/2024


Provided by

ಬೆಂಗಳೂರು: ಡೇಟಿಂಗ್ ಆ್ಯಪ್ ನಲ್ಲಿ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬಳು ಮಡಿವಾಳ ಪೊಲೀಸ್  ಠಾಣೆಯಲ್ಲಿ ಯುವಕನ ವಿರುದ್ಧ ದೂರು ನೀಡಿದ್ದಾಳೆ.

ನಿಹಾಲ್ ಹುಸೇನ್ ಎಂಬಾತ ಕಳೆದ ಮಾರ್ಚ್ ನಲ್ಲಿ ಸಂತ್ರಸ್ತ ಯುವತಿಗೆ ಡೇಟಿಂಗ್ ಆ್ಯಪ್ ನಲ್ಲಿ ಪರಿಚಯವಾಗಿದ್ದ.  ಬಳಿಕ ಅದೇ ತಿಂಗಳಲ್ಲಿ ಪಾರ್ಟಿ ಹೆಸರಿನಲ್ಲಿ ಹೊಟೇಲ್ ಗೆ ಕರೆಸಿ, ಜ್ಯೂಸ್ ನಲ್ಲಿ ಮದ್ಯ ಬೆರೆಸಿ ಅತ್ಯಾಚಾರ ನಡೆಸಿದ್ದು, ಪರಿಣಾಮವಾಗಿ ಆಕೆಯ ಗರ್ಭಿಣಿಯಾಗಿದ್ದು, ಈ ವೇಳೆ ಅಬಾರ್ಷನ್ ಮಾಡಿಸಿದ್ದಾನೆ ಎಂದು ದೂರಿನಲ್ಲಿ ಯುವತಿ ತಿಳಿಸಿದ್ದಾಳೆ.

2023ರಲ್ಲಿ ಕೂಡ ಇದೇ ಯುವತಿ ಮತ್ತೊಬ್ಬ ಯುವಕನ ವಿರುದ್ಧವೂ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿರುವ ಬಗ್ಗೆ  ಮಡಿವಾಳ ಪೊಲೀಸ್ ಠಾಣೆಯಲ್ಲೇ ದೂರು ದಾಖಲಿಸಿದ್ದಳು ಎನ್ನಲಾಗಿದೆ.  ಇದೀಗ ಪೊಲೀಸರು ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ