ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟ

Prajwal Revanna
01/08/2025

ಬೆಂಗಳೂರು: ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಇನ್ನೂ ತೀರ್ಪು ಪ್ರಕಟವಾಗುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ  ಕಣ್ಣೀರೊರೆಸುತ್ತಾ ಕೋರ್ಟ್ ಹಾಲ್ ​ನಿಂದ ನಿರ್ಗಮಿಸಿದರು. ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜುಲೈ 30 ರಂದೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಬೇಕಿತ್ತು. ಆದರೆ, ಕೆಲವೊಂದು ಸ್ಪಷ್ಟೀಕರಣ ಬೇಕಿದ್ದರಿಂದ ತೀರ್ಪನ್ನು ಕಾಯ್ದಿರಿಸುತ್ತಿರುವುದಾಗಿ ಜಡ್ಜ್ ತಿಳಿಸಿದ್ದರು.

ಸರಣಿ ಅತ್ಯಾಚಾರ ಎಸಗಿರುವ ಆರೋಪ ಪ್ರಜ್ವಲ್ ರೇವಣ್ಣ ಮೇಲಿದ್ದು, ಇದರಲ್ಲಿ ಮೈಸೂರಿನ ಕೆಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪವೂ ಒಂದಾಗಿದೆ. ಅತ್ಯಾಚಾರ ಪ್ರಕರಣ ಬೆಳಕಿಗೆ ಬರಬಾರದು ಎಂದು ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿಹಾಕಲಾಗಿತ್ತು ಎಂಬ ಆರೋಪದ ಅಡಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್​ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದಾರೆ.

ಕೆಆರ್ ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್​ಡಿ ರೇವಣ್ಣ ಹಾಗೂ ಭವಾನಿ ರೇವಣ್ಣಗೆ  ಈಗಾಗಲೇ ಜಾಮೀನು ದೊರೆತಿದೆ. ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಒಂದು ವರ್ಷದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣರನ್ನು ಪೊಲೀಸರು ಬಂಧಿಸಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version