ಭಕ್ತರ ನಂಬಿಕೆ ಕಾಮಕ್ಕೆ ಬಳಕೆ: ವಿದ್ಯಾರ್ಥಿನಿ ಮೇಲೆ ಸ್ವಾಮೀಜಿಯಿಂದ ಅತ್ಯಾಚಾರ | ಹಠಯೋಗಿ ಲೋಕೇಶ್ವರ ಸ್ವಾಮೀಜಿ ಅರೆಸ್ಟ್

ಚಿಕ್ಕೋಡಿ: ಭಕ್ತಿ ಇರಬೇಕು, ಆದ್ರೆ ಅಂಧ ಭಕ್ತಿ ಇದ್ರೆ… ಮೋಸ ಮಾಡುವವರ ಸಂಖ್ಯೆಯೂ ಹೆಚ್ಚಿರುತ್ತದೆ. ಅವನನ್ನು ಸ್ವಾಮೀ ಎಂದು ನಂಬಿ ಸಾಕಷ್ಟು ಜನ ಭಕ್ತರು ತಮ್ಮ ಅನಾರೋಗ್ಯ ಪೀಡಿತ ಮಕ್ಕಳನ್ನು ಆತನ ಮಠದಲ್ಲಿ ಬಿಟ್ಟು ಹೋಗುತ್ತಿದ್ದರಂತೆ ಆದ್ರೆ, ಸ್ವಾಮೀಜಿ ಭಕ್ತರ ನಂಬಿಕೆಯನ್ನು ತನ್ನ ಕಾಮಕ್ಕೆ ಬಳಸಿಕೊಂಡು ದುರುಪಯೋಗ ಪಡಿಸಿಕೊಂಡು ಇದೀಗ ಕಂಬಿ ಎಣಿಸುತ್ತಿದ್ದಾನೆ.
ಹೌದು… ! ವಿದ್ಯಾರ್ಥಿನಿಯನ್ನು ಮನೆಗೆ ಬಿಡುವುದಾಗಿ ಹೇಳಿ ಬೇರೆ ಜಿಲ್ಲೆಗಳಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಮೇಕಳಿ ಗ್ರಾಮದ ಮಠಾಧೀಶ ಹಠಯೋಗಿ ಲೋಕೇಶ್ವರ ಎಂಬ ಸ್ವಾಮೀಜಿಯನ್ನ ಬಂಧಿಸಲಾಗಿದೆ
ರಾಯಭಾಗ ತಾಲೂಕಿನ ಮೇಕಳಿ ಗ್ರಾಮದ ಮಠದ ಸ್ವಯಂಘೋಷಿತ ಸ್ವಾಮೀಜಿ ಲೋಕೇಶ್ವರ ಸ್ವಾಮೀಜಿ ವಿರುದ್ಧ ಮೂಡಲಗಿ ಪೊಲೀಸ್ ಠಾಣೆಯಲ್ಲಿ 21ರಂದು ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆ ಪೊಲೀಸರು ತಕ್ಷಣವೇ ಲೋಕೇಶ್ವರ ಸ್ವಾಮೀಜಿ ವಶಕ್ಕೆ ತೆಗೆದುಕೊಂಡು ಬಂಧಿಸಿದ್ದಾರೆ.
ಬಂಧಿತ ಸ್ವಾಮೀಜಿ ಮೂಲತಃ ಕಲಬುರಗಿ ಜಿಲ್ಲೆಯವನಾಗಿದ್ದು, ಮೇಕಳಿ ಗ್ರಾಮದಲ್ಲಿ ಮಠ ಕಟ್ಟಿಕೊಂಡು ಕಳೆದ ಹಲವು ವರ್ಷಗಳಿಂದ ಇಲ್ಲಿಯೇ ನೆಲೆಸಿದ್ದಾನೆ. ಸುತ್ತಮುತ್ತಲಿ ಜನ ಈ ಮಠದ ಭಕ್ತರಿದ್ದು, ಮಠದಲ್ಲಿ ಅನಾರೋಗ್ಯ ಪೀಡಿತರನ್ನು ಕೆಲವರು ಇಲ್ಲೇ ಬಿಟ್ಟು ಹೋಗುತ್ತಿದ್ದರು. ಭಕ್ತರ ನಂಬಿಕೆ ಹಾಗೂ ವಿಶ್ವಾಸವನ್ನು ದುರುಪಯೋಗ ಪಡೆದುಕೊಂಡು ಈ ದುಷ್ಕೃತ್ಯ ಎಸಗಿದ್ದಾನೆ ಎಂದು ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ.
ನೊಂದ ವಿದ್ಯಾರ್ಥಿನಿಯನ್ನು ಮನೆಗೆ ಬಿಡುವುದಾಗಿ ಹೇಳಿ ಕಾರಿನಲ್ಲಿ ಕೂರಿಸಿಕೊಂಡು ಬಾಗಲಕೋಟೆ, ರಾಯಚೂರು ಜಿಲ್ಲೆಗಳ ಲಾಡ್ಜ್ ಕರೆದುಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರ ಎಸೆಗಿದ್ದಾನೆಂದು ಸಂತ್ರಸ್ತೆಯ ಪೋಷಕರು ದೂರು ನೀಡಿದ್ದಾರೆ. ಸ್ವಾಮೀಜಿಯನ್ನು ಬಂಧಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: