ಬುದ್ಧಿಮಾಂದ್ಯ ಮಗಳ ಮೇಲೆಯೇ ತಂದೆಯಿಂದ ಅತ್ಯಾಚಾರ: ಆರೋಪಿ ಅರೆಸ್ಟ್ - Mahanayaka
4:38 PM Wednesday 10 - December 2025

ಬುದ್ಧಿಮಾಂದ್ಯ ಮಗಳ ಮೇಲೆಯೇ ತಂದೆಯಿಂದ ಅತ್ಯಾಚಾರ: ಆರೋಪಿ ಅರೆಸ್ಟ್

belagavi news
05/01/2024

ಬೆಳಗಾವಿ: ತಂದೆಯ ನಿರಂತರ ಅತ್ಯಾಚಾರದ ಪರಿಣಾಮವಾಗಿ ಬುದ್ಧಿಮಾಂದ್ಯ ಮಗಳು ಮಗುವಿಗೆ ಜನ್ಮ ನೀಡಿರುವ  ಆಘಾತಕಾರಿ ಘಟನೆಯೊಂದು ಬೆಳಗಾವಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

2023ರ ಫೆಬ್ರವರಿಯಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತ ಯುವತಿಯ ತಾಯಿ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಹೀಗಾಗಿ ಮನೆಯಲ್ಲಿ ತಂದೆ ಹಾಗೂ ಬುದ್ಧಿಮಾಂದ್ಯ ಯುವತಿ ಮಾತ್ರವೇ ಇದ್ದರು.

ಬುದ್ಧಿಮಾಂದ್ಯ ಯುವತಿ ಗರ್ಭ ಧರಿಸಿರುವ ಬಗ್ಗೆ ಗ್ರಾಮಸ್ಥರಿಗೆ ಅನುಮಾನ ಬಂದಿದ್ದು, ಅವರು ಆಶಾ ಕಾರ್ಯಕರ್ತೆಯರ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಎನ್ ಜಿಓ ತಂಡವೊಂದು ಪರಿಶೀಲನೆ ನಡೆಸಿದ್ದು, ಈ ವೇಳೆ ಯುವತಿ ಗರ್ಭಿಣಿ ಎನ್ನುವುದು ಖಚಿತವಾಗಿತ್ತು.

ಈ ಬಗ್ಗೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆಯ ಭಾಗವಾಗಿ ಡಿಎನ್ ಎ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಯುವತಿಯು ತನ್ನ ತಂದೆಯ ಅತ್ಯಾಚಾರದಿಂದ ಗರ್ಭಿಣಿಯಾಗಿರುವುದು ಖಚಿತವಾಗಿದೆ.

ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ಸೆಪ್ಟಂಬರ್ ನಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ