5:53 PM Tuesday 18 - November 2025

ಮನೆ ಕೆಲಸದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಹಿರಿಯ ಪೊಲೀಸ್ ಅಧಿಕಾರಿ ಅರೆಸ್ಟ್

crime news
18/03/2024

ಗುವಾಹಟಿ:  ಮನೆ ಕೆಲಸದ ಅಪ್ರಾಪ್ತ ವಯಸ್ಸಿನ  ಬಾಲಕಿಯ ಮೇಲೆ ಹಿರಿಯ ಪೊಲೀಸ್ ಅಧಿಕಾರಿಯೋರ್ವ ಲೈಂಗಿಕ ಕ್ರೌರ್ಯ ಮೆರೆದಿರುವ ಘಟನೆ  ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ, ಅಸ್ಸಾಂನ ಹಿರಿಯ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ.

ಗೋಲಘಾಟ್ ಜಿಲ್ಲೆಯ ಲಚಿತ್ ಬೊರ್ಫುಕನ್ ಪೊಲೀಸ್ ಅಕಾಡೆಮಿಯಲ್ಲಿನಿಯೋಜಿಸಲಾಗಿದ್ದ ಪೊಲೀಸರು ಉಪ ವರಿಷ್ಠಾಧಿಕಾರಿ(ಡಿಎಸ್‌ಪಿ) ಕಿರಣ್ ನಾಥ್ ನನ್ನು  ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಭಾನುವಾರ ಸಂಜೆ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

15 ವರ್ಷದ ಬಾಲಕಿ, ಪೊಲೀಸ್ ಅಧಿಕಾರಿ ತನ್ನ ಮೇಲೆ ಅನೇಕ ಸಂದರ್ಭಗಳಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ತನ್ನನ್ನು ಮನೆಯಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಸಂಬಂಧ ಬಾಲಕಿಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದಾಗ ವಿಷಯ ಬೆಳಕಿಗೆ ಬಂದಿದೆ. ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 376 (ಮತ್ತು 506 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ ಸೆಕ್ಷನ್ 6 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version