ರಾಷ್ಟ್ರಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ: ಸಚಿವ ಈಶ್ವರಪ್ಪ ಕೈ ಬಿಡುವಂತೆ ಆಗ್ರಹಿಸಿ ನಿಲುವಳಿ ಸೂಚನೆ; ಸಿದ್ದರಾಮಯ್ಯ - Mahanayaka
4:55 PM Wednesday 20 - August 2025

ರಾಷ್ಟ್ರಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ: ಸಚಿವ ಈಶ್ವರಪ್ಪ ಕೈ ಬಿಡುವಂತೆ ಆಗ್ರಹಿಸಿ ನಿಲುವಳಿ ಸೂಚನೆ; ಸಿದ್ದರಾಮಯ್ಯ

siddaramaiha
16/02/2022


Provided by

ಬೆಂಗಳೂರು: ಕೆಂಪುಕೋಟೆ ಮೇಲಿರುವ ರಾಷ್ಟ್ರಧ್ವಜ ಇಳಿಸಿ ಕೇಸರಿ‌ ಧ್ವಜ ಹಾರಿಸುತ್ತೇವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಇದು ರಾಷ್ಟ್ರಧ್ವಜಕ್ಕೆ ಅಗೌರವ ಸೂಚಿಸಿದಂತೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್​ ನಾಯಕರ ಸಭೆಯಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದೇವೆ. ಸಂವಿಧಾನದಲ್ಲಿ ಇದರ ಬಗ್ಗೆ ಪ್ರಸ್ತಾಪ ಮಾಡಿದ್ದೇವೆ. ರಾಷ್ಟ್ರಧ್ವಜ ಇಳಿಸಿ ಕೇಸರಿ ಧ್ವಜ ಏರಿಸುತ್ತೇವೆ ಎಂದು ಹೇಳಿರುವುದು ದೇಶದ್ರೋಹದ ಕೆಲಸ. ಹಾಗಾಗಿ, ಅವರು ಸರ್ಕಾರದಲ್ಲಿ ಇರಲು ಯೋಗ್ಯರಲ್ಲ. ಅವರನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಈ ಬಗ್ಗೆ ನಿಲುವಳಿ ಸೂಚನೆ ನೀಡುತ್ತೇವೆ ಎಂದರು.

ಹಿಜಾಬ್ ಮತ್ತು ಕೇಸರಿ ಶಾಲು ವಿಚಾರ ಮಾತನಾಡಿ, ಅಲ್ಪಸಂಖ್ಯಾತರ ಪರ ಮೊದಲಿಂದಲೂ ಪಕ್ಷ ಇದೆ. ಅಲ್ಪಸಂಖ್ಯಾತರಿಗೆ, ಸಂವಿಧಾನಕ್ಕೆ ಗೌರವ ನೀಡುತ್ತಾ ಬಂದಿದ್ದೇವೆ. ಜಾತ್ಯಾತೀತದ ಬಗ್ಗೆ ಸಂವಿಧಾನದ ಆಶಯಗಳನ್ನು ಪಾಲಿಸುವುದು ಪಕ್ಷದ ಕರ್ತವ್ಯ. ಪಕ್ಷದ ಸ್ಟ್ಯಾಂಡ್ ಕ್ಲಿಯರ್ ಇರಲಿಲ್ಲ, ಪಕ್ಷದ ಹಿರಿಯರ ಜೊತೆ ಚರ್ಚೆ ಮಾಡಿ ಒಂದು ನಿಲುವು ತೆಗೆದುಕೊಂಡಿದ್ದೇವೆ ಎಂದರು.

ಮೊದಲಿಂದಲೂ ಎಲ್ಲಾ ಧರ್ಮಗಳಲ್ಲಿ ಅವರದ್ದೇ ಆದ ಪಾಲನೆ ಇದೆ. ಯಾವ ರೀತಿ ವಸ್ತ್ರ ಧರಿಸಬೇಕು, ಏನು ಮಾಡಬೇಕು ಎಂದು ಸಂವಿಧಾನದಲ್ಲಿದೆ. ಸಂವಿಧಾನ ನಮಗೆ ಹಕ್ಕು ಕೊಟ್ಟಿದೆ. ಫೆ. 5ರ ಮೊದಲು ಎಲ್ಲ ಸರಿಯಿತ್ತು. ರಾಜ್ಯದಲ್ಲಿ ಸರ್ಕಾರ ಗೊಂದಲ ಸೃಷ್ಟಿಸುತ್ತಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ನೊಂದ ಸಮಾಜಕ್ಕೆ ಧ್ವನಿಯಾಗುವ ಜವಾಬ್ದಾರಿ ಕಾಂಗ್ರೆಸ್ ಪಕ್ಷ ತೆಗೆದುಕೊಳ್ಳುತ್ತದೆ. ಇದು ಕಾಂಗ್ರೆಸ್ ಪಕ್ಷದ ಸ್ಪಷ್ಟ ನಿಲುವು ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ, ದೇಶದಲ್ಲಿ ರಾಷ್ಟ್ರಧ್ವಜಕ್ಕೆ ಆಗುತ್ತಿರುವ ಅಪಮಾನ, ರಾಷ್ಟ್ರಧ್ವಜದ ಬಗ್ಗೆ ಬಿಜೆಪಿ ನಾಯಕರು, ಸಚಿವರು ಆಡಿರುವ ಮಾತಿನ ಬಗ್ಗೆ ಜನರು ಬಹಳ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಾವಿಗೆ ಬಿದ್ದು ಬಾಲಕಿ ಸಾವು: ತಾಯಿ ವಿರುದ್ಧ ತಂದೆಯಿಂದಲೇ ಕೊಲೆ ಆರೋಪ

ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯನ್ನು ಅಟ್ಟಾಡಿಸಿ ವಿಡಿಯೋ ಮಾಡಿದ ಪತ್ರಕರ್ತ!

ವಿದೇಶಿ ಮಹಿಳೆಯಿಂದ ಕ್ಯಾಬ್ ಚಾಲಕನಿಗೆ ಚಾಕುವಿನಿಂದ ಇರಿತ

ಭೀಕರ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು

ಇತ್ತೀಚಿನ ಸುದ್ದಿ