ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿ: ವ್ಯಕ್ತಿ ಸಾವು
ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ನಗರದ ಕೊಟ್ಟಾರ ಚೌಕಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಆಕಾಶಭವನದ ಅಶೋಕ್ (45) ಎಂದು ಗುರುತಿಸಲಾಗಿದೆ. ಅಶೋಕ್ ಅವರು ತನ್ನ ಆ್ಯಕ್ಟಿವಾ ದ್ವಿಚಕ್ರ ವಾಹನವನ್ನು ರಸ್ತೆ ಪಕ್ಕ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಹರ್ಯಾಣ ರಾಜ್ಯದ ನೋಂದಣಿ ಹೊಂದಿದ್ದ ಲಾರಿಯು ಡಿಕ್ಕಿ ಹೊಡೆದಿದೆ.
ಇದರಿಂದ ಅಶೋಕ್ ಗೆ ಗಂಭೀರ ಗಾಯವಾಗಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷಿಸಿದ ವೈದ್ಯರು ಅಶೋಕ್ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಕುರಿತು ಮಂಗಳೂರು ಸಂಚಾರ ಉತ್ತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka