ರೇವ್ ಪಾರ್ಟಿ ಕೇಸ್: ತೆಲುಗು ನಟಿ ಹೇಮಾ ಜೈಲಿನಿಂದ ಬಿಡುಗಡೆ - Mahanayaka

ರೇವ್ ಪಾರ್ಟಿ ಕೇಸ್: ತೆಲುಗು ನಟಿ ಹೇಮಾ ಜೈಲಿನಿಂದ ಬಿಡುಗಡೆ

rave party case
14/06/2024

ಬೆಂಗಳೂರು :  ರೇವ್ ಪಾರ್ಟಿ ಕೇಸ್ ನಲ್ಲಿ ಬಂಧಿತರಾಗಿದ್ದ ತೆಲುಗು ನಟಿ ಹೇಮಾ ಅವರು ಜಾಮೀನಿನ ಮೇರೆಗೆ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.


Provided by

ಜಾಮೀನು ಮಂಜೂರಾಗಿ 2 ದಿನಗಳ ನಂತರ ಇಂದು ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ.  ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ ನಟಿ ಹೇಮಾ ಅವರನ್ನು ಪೊಲೀಸರು ಬಂಧಿಸಿದ್ದರು.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಜಿ.ಆರ್. ಫಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣದಲ್ಲಿ ಪೊಲೀಸರು ಹೇಮಾ ಅವರನ್ನು ಬಂಧಿಸಿದ್ದರು.

ಜೂನ್ 3ರಂದು ಹೇಮಾ ಅವರನ್ನು ಬಂಧಿಸಲಾಗಿತ್ತು. ನಂತರ ಅವರಿಗೆ ಜಾಮೀನು ಮಂಜೂರಾಗಿತ್ತು. ಜಾಮೀನು ಸಿಕ್ಕ 2 ದಿನಗಳ ಬಳಿಕ ಜೈಲಿನಿಂದ ಬಿಡುಗಡೆ ಆಗಿ ತಮ್ಮ ಸಹೋದರ ಶ್ರೀನಿವಾಸ್ ಜೊತೆ ತೆರಳಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ