ಬ್ರೇಕಿಂಗ್ ನ್ಯೂಸ್: ಖ್ಯಾತ ಪತ್ರಕರ್ತ ರವಿ ಬೆಳಗೆರೆ ಇನ್ನಿಲ್ಲ
ಬೆಂಗಳೂರು: ಹಿರಿಯ ಪತ್ರಕರ್ತ, ಬರಹಗಾರ ರವಿಬೆಳಗೆರೆ ಅವರಿಗೆ ನಿನ್ನೆ ತಡರಾತ್ರಿ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅವರು ನಿಧನರಾಗಿದ್ದಾರೆ.
ರಾತ್ರಿ 12 ಗಂಟೆಗೆ ಅವರು ಬೆಂಗಳೂರಿನ ಹಾಯ್ ಬೆಂಗಳೂರು ಆಫೀಸ್ ನಲ್ಲಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಅಪೋಲೋ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಮಾರ್ಚ್ 15, 1958ರಲ್ಲಿ ಜನಿಸಿದ್ದ ರವಿ ಬೆಳಗೆರೆ ಅವರು, ಪತ್ರಿಕಾರಂಗದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದರು. ಅಪರಾಧ ಜಗತ್ತಿನ ಜೊತೆಗೆ ಹಲವು ಪುಸ್ತಕಗಳನ್ನೂ ಬರೆದಿದ್ದಾರೆ. ಅಪರಾಧಿಗಳ ಜೊತೆಗೆ ನೇರ ನಂಟನ್ನೂ ಅವರು ಹೊಂದಿದ್ದರು.
ಬೆಂಗಳೂರಿನ ಪ್ರಾರ್ಥನಾ ಶಾಲೆಯಲ್ಲಿ ರವಿ ಬೆಳಗೆರೆ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ಅಂತಿಮ ದರ್ಶನಕ್ಕೆ ಅವಕಾಶವಿದೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.