ಅನ್ನದಾನೇಶ್ವರ ಸ್ವಾಮೀಜಿ ಹತ್ಯೆಯ ಹಿಂದಿನ ಕಾರಣ ಬಯಲು!

ಮೈಸೂರು: ಕೆಲವು ದಿನಗಳ ಹಿಂದೆ ಅನ್ನದಾನೇಶ್ವರ ಸ್ವಾಮೀಜಿ ಬರ್ಬರವಾಗಿ ಹತ್ಯೆಯಾಗಿದ್ದರು. ಇದೀಗ ಸ್ವಾಮೀಜಿಯ ಹತ್ಯೆಗೆ ಕಾರಣ ಬಯಲಾಗಿದೆ.
ಸ್ವಾಮೀಜಿಯ ಆಪ್ತ ಸಹಾಯಕ ಎನ್ನಲಾಗಿರುವ ರವಿ ಎಂಬಾತನೇ ಸ್ವಾಮೀಜಿಯನ್ನು ಹತ್ಯೆ ಮಾಡಿದ್ದಾನೆ. ಹತ್ಯೆಯ ಬಳಿಕ ಆರೋಪಿ ಆತ್ಮಹತ್ಯೆಗೆ ಯತ್ನಿಸಿದ್ದು, ಇದೀಗ ಆತನಿಗೆ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆರೋಪಿ ರವಿ ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪೊಲೀಸರು ಆತನನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದು, ಆತನಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.
ಕೊಲೆಗೆ ಕಾರಣ ಏನು?
ವರದಿಗಳ ಪ್ರಕಾರ ಕುಡಿತದ ಚಟಕ್ಕೆ ಒಳಗಾಗಿದ್ದ ರವಿಗೆ ಸ್ವಾಮೀಜಿ ಬುದ್ಧಿವಾದ ಹೇಳಿದ್ದರು, ಕುಡಿಯಲು ಹಣ ನೀಡಲಿಲ್ಲ ಎನ್ನುವ ಕಾರಣದಿಂದ ಕೋಪಕೊಂಡು ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ.
ಮೈಸೂರಿನ ಸಿದ್ದಾರ್ಥನಗರದಲ್ಲಿ 90 ವರ್ಷ ವಯಸ್ಸಿನ ಸಿ.ಶಿವಾನಂದ ಸ್ವಾಮೀಜಿ ಬರ್ಬರವಾಗಿ ಹತ್ಯೆಯಾಗಿದ್ದರು. ಘಟನೆ ಸಂಬಂಧ ನಜರ್ಬದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ರವಿ ಆತ್ಮಹತ್ಯೆಗೆ ಯತ್ನಿಸಿರುವ ಹಿನ್ನೆಲೆಯಲ್ಲಿ ಆತ ಗುಣಮುಖನಾದ ಬಳಿಕ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth