ರೆಡ್‌ ಅಲರ್ಟ್‌ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 2 ದಿನ ಶಾಲಾ ಕಾಲೇಜುಗಳಿಗೆ ರಜೆ - Mahanayaka
12:45 PM Tuesday 21 - October 2025

ರೆಡ್‌ ಅಲರ್ಟ್‌ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 2 ದಿನ ಶಾಲಾ ಕಾಲೇಜುಗಳಿಗೆ ರಜೆ

mangalore rain
26/05/2025

ಮಂಗಳೂರು: ಮುಂಗಾರು ಮಳೆ ಕರ್ನಾಟಕ ಪ್ರವೇಶಿಸಿದೆ. ಕರಾವಳಿ ಭಾಗದಲ್ಲಿ ಸತತ 2ನೇ ದಿನವೂ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ 2 ದಿನ ರಜೆ ಘೋಷಿಸಲಾಗಿದೆ.

ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಣೆಯಾಗಿದ್ದು, ಮೇ 27 ಮತ್ತು ಮೇ 28ರಂದು ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲಾ ಕಾಲೇಜುಗಳು, ಅಂಗನವಾಡಿ ಕೇಂದ್ರಗಳು ಪ್ರಾಥಮಿಕ, ಫೌಡಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ರಜೆ ಘೋಷಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ