ಭಾರೀ ಮಳೆಯ ಸಾಧ್ಯತೆ | ಈ ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್!
ಭಾರೀ ಮಳೆಯಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಕೇರಳದ 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ 3 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಈ ಮುನ್ಸೂಚನೆಯನ್ನು ನೀಡಲಾಗಿದೆ.
ತಿರುವನಂತಪುರಂ, ಕೊಲ್ಲಂ, ಪಥನಂತ್ತಿಟ್ಟ ಮತ್ತು ಆಲಪ್ಪುಳ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಕೊಟ್ಟಾಯಂ, ಇಡುಕ್ಕಿ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ಸೂಚನೆ ಬರುವವರೆಗೂ ಮೀನುಗಾರರು ಮೀನುಗಾರರು ಸಮುದ್ರಕ್ಕಿಳಿಯದಂತೆ ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ. ರಾಜ್ಯದಲ್ಲಿ ಮಂಗಳವಾರದಿಂದ ಶುಕ್ರವಾರದ ನಡುವೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂದಿನ 36 ಗಂಟೆಗಳಲ್ಲಿ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.