4:14 PM Saturday 18 - October 2025

ಭಾರೀ ಮಳೆಯ ಸಾಧ್ಯತೆ | ಈ ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್!

30/11/2020

ಭಾರೀ ಮಳೆಯಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಕೇರಳದ 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ 3 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು,  ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಈ ಮುನ್ಸೂಚನೆಯನ್ನು ನೀಡಲಾಗಿದೆ.

ತಿರುವನಂತಪುರಂ, ಕೊಲ್ಲಂ, ಪಥನಂತ್ತಿಟ್ಟ ಮತ್ತು ಆಲಪ್ಪುಳ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಕೊಟ್ಟಾಯಂ, ಇಡುಕ್ಕಿ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.


ಮುಂದಿನ ಸೂಚನೆ ಬರುವವರೆಗೂ ಮೀನುಗಾರರು  ಮೀನುಗಾರರು ಸಮುದ್ರಕ್ಕಿಳಿಯದಂತೆ ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ. ರಾಜ್ಯದಲ್ಲಿ ಮಂಗಳವಾರದಿಂದ ಶುಕ್ರವಾರದ ನಡುವೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂದಿನ 36 ಗಂಟೆಗಳಲ್ಲಿ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ.

 

ಇತ್ತೀಚಿನ ಸುದ್ದಿ

Exit mobile version