ಚಿಕ್ಕಮಗಳೂರು: ಭಾರೀ ಮಳೆ ಹಿನ್ನೆಲೆ ನಾಳೆ ರೆಡ್ ಅಲರ್ಟ್!

ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.
ಕಾಫಿನಾಡಿಗೆ ನಾಳೆ ರೆಡ್ ಅಲರ್ಟ್, ನಾಡಿದ್ದು ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಹಾಯಕ್ಕಾಗಿ ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಕಂಟ್ರೋಲ್ ರೂಂ ಓಪನ್ ಮಾಡಲಾಗಿದೆ.
ಹಳ್ಳ, ನದಿ, ತಗ್ಗು ಪ್ರದೇಶಗಳ ಬಳಿ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಜಾನುವಾರು, ಬಟ್ಟೆ ತೊಳೆಯಲು ಹಳ್ಳ–ಕೆರೆಕಟ್ಟೆ ಬಳಿ ಹೋಗದಂತೆ ಸೂಚನೆ ನೀಡಲಾಗಿದೆ.
ಇನ್ನೂ ಧರೆ, ಗುಡ್ಡ ಕುಸಿಯುವ ಸಾಧ್ಯತೆಯಿದ್ದು ಜನ ಎಚ್ಚರಿಕೆಯಿಂದಿರಬೇಕು ಎಂದು ಸೂಚನೆ ನೀಡಲಾಗಿದೆ. ಮಲೆನಾಡಲ್ಲಿ ಬೆಳಗ್ಗೆಯಿಂದಲೂ ನಿರಂತರವಾಗಿ ಮಳೆ ಸುರಿಯುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD