ರೆಡ್ – ಅಲರ್ಟ್: ಜು.25ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

school
24/07/2025

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.25ರಂದು ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಮುಂಜಾಗೃತಾ ಕ್ರಮವಾಗಿ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗೃತೆ ವಹಿಸಬೇಕು.  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕು.  ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಸೂಚಿಸಲಾಗಿದೆ.

ಪ್ರವಾಸಿಗರು,  ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತರಳದಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳಬೇಕು,  ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಮ್ 0824 2442590ನ್ನು ಸಂಪರ್ಕಿಸಬಹುದು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version