ರೀಲ್ಸ್ ಯಡವಟ್ಟು: ರಾತ್ರೋ ರಾತ್ರಿ ರಜತ್, ವಿನಯ್ ಗೌಡ ಬಿಡುಗಡೆ

ಬೆಂಗಳೂರು: ರೀಲ್ಸ್ ಮಾಡುವ ಉದ್ದೇಶದಿಂದ ಲಾಂಗ್ ಹಿಡಿದು ವಿಡಿಯೋ ಮಾಡಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ನಿನ್ನೆ ರಾತ್ರಿಯೇ ಇಬ್ಬರನ್ನೂ ಬಿಡುಗಡೆ ಮಾಡಿದ್ದಾರೆ.
ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಇವರಿಬ್ಬರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿತ್ತು. ಬಸವೇಶ್ವರ ಠಾಣೆ ಪೊಲೀಸರು ಈ ಇಬ್ಬರು ನಟರನ್ನು ಬಂಧಿಸಿದ್ದರು. ಮಧ್ಯಾಹ್ನ ಇಬ್ಬರನ್ನೂ ಬಂಧಿಸಲಾಗಿತ್ತು. ರಾತ್ರೋ ರಾತ್ರಿ ಬಿಡುಗಡೆಗೊಳಿಸಲಾಗಿದೆ.
ತಾವು ಫೈಬರ್ ಮಚ್ಚು ಬಳಸಿ ವಿಡಿಯೋ ಮಾಡಿರುವುದಾಗಿ ರಜತ್ ಹಾಗೂ ವಿನಯ್ ಹೇಳಿಕೆ ನೀಡಿದ್ದಾರೆ. ಹೀಗಾಗಿ ಅವರಿಗೆ ನೋಟಿಸ್ ನೀಡಿ ಬಿಟ್ಟುಕಳುಹಿಸಿದ್ದಾರೆ. ಇಂದು ಬೆಳಗ್ಗೆ 10:30ಕ್ಕೆ ಠಾಣೆಗೆ ಬರುವಂತೆ ಇಬ್ಬರಿಗೂ ಪೊಲೀಸರು ಸೂಚನೆ ನೀಡಿ ಬಿಡುಗಡೆ ಮಾಡಿರುವುದಾಗಿ ತಿಳಿದು ಬಂದಿದೆ. ರೀಲ್ಸ್ ಮಾಡಲು ಬಳಕೆ ಮಾಡಿದ್ದ ಮಚ್ಚನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7