4:15 AM Wednesday 22 - October 2025

ರಾಜ್ ಬಿ ಶೆಟ್ಟಿ ನಟಿಸಿರುವ ‘ಟೋಬಿ’ ಚಿತ್ರದ ರಿಲೀಸ್ ಗೆ ಮುಹೂರ್ತ ಫಿಕ್ಸ್

tobi
13/06/2023

ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸಿರುವ ‘ಟೋಬಿ’ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ವಿಭಿನ್ನ ಕಥೆಯ ಈ ಚಿತ್ರ ಆಗಸ್ಟ್ 25 ರಂದು ಬಿಡುಗಡೆಯಾಗಲಿದೆ. ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದೆ. ಟೋಬಿ ಚಿತ್ರಕ್ಕೆ ‘ಮಾರಿ ಮಾರಿ ..ಮಾರಿಗೆ ದಾರಿ’ ಎಂಬ ಅಡಿಬರಹವಿದೆ.

ಸಿನಿಮಾ ತಂಡ ಅಧಿಕೃತವಾಗಿಯೇ ಟೋಬಿ ಚಿತ್ರದ ಮಾಹಿತಿಯನ್ನ ಕೊಟ್ಟಿದೆ. ನಮ್ಮ ಸಿನಿಮಾದ ಟೈಟಲ್ ಟೋಬಿ ಅನ್ನೋದೇ ಆಗಿದೆ. ಮೋಷನ್ ಪೋಸ್ಟರ್ ಮೂಲಕವೇ ಈ ಒಂದು ಮಾಹಿತಿಯನ್ನ ಕೊಟ್ಟಿದೆ.
ರಾಜ್ ಬಿ ಶೆಟ್ಟಿ ಈವರೆಗಿನ ಚಿತ್ರಗಳ ಪೈಕಿ ಟೋಬಿ ಬಿಗ್ ಬಜೆಟ್ ನ ಚಿತ್ರವಾಗಿದೆ. ಲೈಟರ್ ಬುದ್ಧ ಫಿಲಂಸ್, ಅಗಸ್ತ್ಯ ಫಿಲ್ಮ್ಸ್ ಹಾಗೂ ಕಾಫಿ ಗ್ಯಾಂಗ್ ಸ್ಟುಡಿಯೋ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ನಿರ್ಮಾಪಕರು ರವಿ ರೈ ಕಳಸ ಈ ಚಿತ್ರದ ನಿರ್ಮಾಪಕರು ಹಾಗೂ ಶಾಮಿಲ್ ಬಂಗೇರ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು, ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ. ಸಂಭಾಷಣೆಗಾರರಾಗಿ, ನಿರ್ದೇಶಕರಾಗಿಯೂ ಗುರುತಿಸಿಕೊಂಡಿರುವ ಟಿ.ಕೆ ದಯಾನಂದ್, ಬೆಲ್ ಬಾಟಮ್, ಅಶೋಕ ಬ್ಲೇಡ್ ಸೇರಿದಂತೆ ಅನೇಕ ಸಿನಿಮಾಗಳಿಗೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಟೋಬಿಗೂ ಕೂಡ ಕಥೆಬರೆದಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version