ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ರಾಜ್ಯದಲ್ಲಿ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ

ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕೆ.ಸಿ.ವೇಣುಗೇಪಾಲ್, ಅಜಯ್ ಮಕೇನ್, ಪವನ್ ಖೇರಾ ಅವರು ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ಕರ್ನಾಟಕದ 7 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಹೀಗಿದೆ:
ಶಿವಮೊಗ್ಗ: ಗೀತಾ ಶಿವರಾಜ್ ಕುಮಾರ್
ಬೆಂಗಳೂರು ಗ್ರಾಮಾಂತರ- ಡಿ.ಕೆ.ಶಿವಕುಮಾರ್
ತುಮಕೂರು: ಮುದ್ದಹನುಮೇಗೌಡ
ಹಾಸನ-ಶ್ರೇಯಸ್ ಪಟೇಲ್
ವಿಜಯಪುರ: ಎಸ್.ಆರ್.ಆಲಗೂರು
ಹಾವೇರಿ: ಆನಂದ್ ಗಡ್ಡ ದೇವರಮಠ
ಮಂಡ್ಯ: ವೆಂಕಟರಾಮೇಗೌಡ (ಸ್ಟಾರ್ ಚಂದ್ರು)
ತೆಲಂಗಾಣದ 4, ಛತ್ತೀಸ್ಗಡದ 6, ಕೇರಳದ 15, ಮೇಘಾಲಯದ 2, ನಾಗಲ್ಯಾಂಡ್, ಸಕ್ಕಿಂ ಹಾಗೂ ತ್ರಿಪುರದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನ ಕಾಂಗ್ರೆಸ್ ಘೋಷಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth