ರಿಲಯನ್ಸ್ ಫೌಂಡೇಶನ್ ನಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ: 5,100 ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್
ಮುಂಬೈ: ದೇಶದ ಭವಿಷ್ಯದ ಯುವ ನಾಯಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಿಲಯನ್ಸ್ ಫೌಂಡೇಶನ್ ತನ್ನ ಪ್ರತಿಷ್ಠಿತ ‘ರಿಲಯನ್ಸ್ ಫೌಂಡೇಶನ್ ಸ್ಕಾಲರ್ಶಿಪ್ 2026-27’ ಯೋಜನೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತದ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ಈ ಮಹತ್ವದ ಯೋಜನೆಯನ್ನು ಪ್ರಕಟಿಸಲಾಗಿದ್ದು, ದೇಶಾದ್ಯಂತ ಒಟ್ಟು 5,100 ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನ ದೊರೆಯಲಿದೆ.
ವಿದ್ಯಾರ್ಥಿವೇತನದ ಮುಖ್ಯ ವಿವರಗಳು:
2026–27ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ವರ್ಷದ 5,000 ಪದವಿ (Undergraduate) ಮತ್ತು 100 ಸ್ನಾತಕೋತ್ತರ (Postgraduate) ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ.
ನೆರವಿನ ಮೊತ್ತ:
ಪದವಿ ವಿದ್ಯಾರ್ಥಿಗಳಿಗೆ: ಕೋರ್ಸ್ ಅವಧಿಯಲ್ಲಿ ಒಟ್ಟು ₹2 ಲಕ್ಷದವರೆಗೆ.
ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ: ಕೋರ್ಸ್ ಅವಧಿಯಲ್ಲಿ ಒಟ್ಟು ₹6 ಲಕ್ಷದವರೆಗೆ.
ಉಚಿತ ಅರ್ಜಿ: ಈ ಸ್ಕಾಲರ್ಶಿಪ್ಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಹೆಚ್ಚುವರಿ ಬೆಂಬಲ: ಧನಸಹಾಯದ ಜೊತೆಗೆ ಮಾರ್ಗದರ್ಶನ (Mentorship) ಮತ್ತು ನಾಯಕತ್ವ ಅಭಿವೃದ್ಧಿ ತರಬೇತಿಗಳನ್ನು ಒದಗಿಸಲಾಗುತ್ತದೆ.
ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆ:
ಪದವಿ ವಿದ್ಯಾರ್ಥಿವೇತನ: ಪ್ರಥಮ ವರ್ಷದ ಪದವಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯು ಆಪ್ಟಿಟ್ಯೂಡ್ ಪರೀಕ್ಷೆ (Aptitude Test) ಮತ್ತು ಕುಟುಂಬದ ಆರ್ಥಿಕ ಹಿನ್ನೆಲೆಯನ್ನು ಆಧರಿಸಿರುತ್ತದೆ.
ಸ್ನಾತಕೋತ್ತರ ವಿದ್ಯಾರ್ಥಿವೇತನ: ಇಂಜಿನಿಯರಿಂಗ್, ತಂತ್ರಜ್ಞಾನ, ಇಂಧನ ಮತ್ತು ಜೀವ ವಿಜ್ಞಾನದಂತಹ ಭವಿಷ್ಯದ ಪ್ರಮುಖ ವಿಷಯಗಳಲ್ಲಿ ಅಧ್ಯಯನ ಮಾಡುತ್ತಿರುವ ಅರ್ಹ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಯೋಗ್ಯತೆ ಮತ್ತು ಸಾಮರ್ಥ್ಯದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ರಿಲಯನ್ಸ್ ಫೌಂಡೇಶನ್ ಕೊಡುಗೆ:
ರಿಲಯನ್ಸ್ ಕಳೆದ ಮೂರು ದಶಕಗಳಿಂದಲೂ ಶಿಕ್ಷಣ ಕ್ಷೇತ್ರಕ್ಕೆ ಬೆಂಬಲ ನೀಡುತ್ತಾ ಬಂದಿದ್ದು, ಇದುವರೆಗೆ ದೇಶದ 33,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ವಿತರಿಸಿದೆ. ಡಿಸೆಂಬರ್ 2022 ರಲ್ಲಿ ರಿಲಯನ್ಸ್ ಸಂಸ್ಥಾಪಕ ಧೀರೂಭಾಯ್ ಅಂಬಾನಿ ಅವರ 90 ನೇ ಜನ್ಮದಿನದಂದು, ರಿಲಯನ್ಸ್ ಫೌಂಡೇಶನ್ ಅಧ್ಯಕ್ಷೆ ನೀತಾ ಎಂ. ಅಂಬಾನಿ ಅವರು 10 ವರ್ಷಗಳಲ್ಲಿ 50,000 ಹೆಚ್ಚುವರಿ ವಿದ್ಯಾರ್ಥಿವೇತನಗಳನ್ನು ನೀಡುವುದಾಗಿ ಘೋಷಿಸಿದ್ದರು. ಕಳೆದ ವರ್ಷ ಆಯ್ಕೆಯಾದ 5,100 ವಿದ್ಯಾರ್ಥಿಗಳು ದೇಶದ 27 ರಾಜ್ಯಗಳು ಮತ್ತು 7 ಕೇಂದ್ರಾಡಳಿತ ಪ್ರದೇಶಗಳ 1,350 ಸಂಸ್ಥೆಗಳಿಗೆ ಸೇರಿದವರಾಗಿದ್ದಾರೆ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ https://scholarships.reliancefoundation.org/ ಮೂಲಕ ಆನ್ ಲೈನ್ನಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD




























