ಕಾರ್ಯಾಗಾರದ ನೆಪದಲ್ಲಿ ಧಾರ್ಮಿಕ ಭಾಷಣ: ವಿದ್ಯಾರ್ಥಿಗಳಿಗೆ ಮಾನಸಿಕ ಕಿರುಕುಳ: ದೂರು ದಾಖಲು - Mahanayaka
8:13 AM Wednesday 15 - October 2025

ಕಾರ್ಯಾಗಾರದ ನೆಪದಲ್ಲಿ ಧಾರ್ಮಿಕ ಭಾಷಣ: ವಿದ್ಯಾರ್ಥಿಗಳಿಗೆ ಮಾನಸಿಕ ಕಿರುಕುಳ: ದೂರು ದಾಖಲು

vittal
19/02/2023

ವಿಶೇಷ ಕಾರ್ಯಾಗಾರದ ನೆಪದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗುವ ರೀತಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿ ವಿದ್ಯಾರ್ಥಿಗಳ ಭಾವನೆಗೆ ಧಕ್ಕೆ ತಂದು ಮಾನಸಿಕವಾಗಿ ಕಿರುಕುಳ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


Provided by

ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಧಾರ್ಮಿಕ ಸಂಘಟನೆಯೊಂದರ ರಾಜ್ ಕಮಲ್‌ ಎಂಬ ಖಾಸಗಿ ಹಾಲ್‌ ನಲ್ಲಿ ಜನತಾ ವಿದ್ಯಾ ಸಂಸ್ಥೆಯ ಮುಖ್ಯೋಪಾಧ್ಯಯ ಟಿ.ಆರ್.ನಾಯಕ್‌, ರಫೀಕ್‌ ಮಾಸ್ಟರ್ ಆತೂರ್ ಹಾಗೂ ನುಸ್ರುತುಲ್‌ ಇಸ್ಲಾಂ ಯಂಗ್‌ ಮೆನ್ಸ್ ಅಸೋಸಿಯಷನ್‌ ಸಂಘಟನಾಕಾರರು ಸದ್ರಿ ಶಾಲೆಯ ವಿಧ್ಯಾರ್ಥಿಗಳನ್ನು ಶೈಕ್ಷಣಿಕ ಕಾರ್ಯಾಗಾರದ ನೆಪದಲ್ಲಿ ಕರೆಸಿಕೊಂಡು ಕಾರ್ಯಾಗಾರದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗುವ ರೀತಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿ ವಿಧ್ಯಾರ್ಥಿಗಳ ಭಾವನೆಗೆ ಧಕ್ಕೆ ತಂದು ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಮಾಧವ ಮೂಲ್ಯ ಎಂಬುವವರು ದೂರು ನೀಡಿದ್ದಾರೆ.

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ .ಕ್ರ 23/2023 ಕಲಂ: 505 (2) ಜೊತೆಗೆ 34 ಬಾಧಂಸಂ ಯಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ