ಚುನಾವಣೆ ಹೊತ್ತಲ್ಲಿ ವಾಸ್ತು ಮೊರೆ ಹೋದ್ರಾ ದಕ್ಷಿಣ ಕನ್ನಡ ಕಾಂಗ್ರೆಸ್ ನಾಯಕರು..?

congress office
14/12/2022

ಮಂಗಳೂರು: ಚುನಾವಣೆ ಹೊತ್ತಿನಲ್ಲೇ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯ ಮೆಟ್ಟಿಲುಗಳ ನವೀಕರಣ ಮಾಡಲಾಗಿದೆ. ಇದು ವಾಸ್ತು ತಜ್ಞರ ಸಲಹೆ ಮೇರೆಗೆ  ಬದಲಾವಣೆ ಮಾಡಲಾಗಿದೆ ಎನ್ನುವ ಗುಸುಗುಸು ಮಾತುಗಳು ಇದೀಗ ಕೇಳಿ ಬಂದಿದೆ.

ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿ ಪ್ರವೇಶ ದ್ವಾರದಲ್ಲಿ ಎಂಟು ಮೆಟ್ಟಿಲುಗಳಿದ್ದವು  ವಾಸ್ತು ಪ್ರಕಾರ ಎಂಟು ಮೆಟ್ಟಿಲುಗಳು ಇರುವುದು ದೋಷವಾಗಿದ್ದು,  ವಾಸ್ತು ಪದ್ದತಿ ಪ್ರಕಾರ ಬೆಸ ಸಂಖ್ಯೆಯಲ್ಲಿ ಮೆಟ್ಟಿಲುಗಳಿರಬೇಕು ಅನ್ನೋ ವಾಸ್ತು ತಜ್ಞರ ಸಲಹೆಯ ಮೇರೆಗೆ ಮೆಟ್ಟಿಲು ನವೀಕರಣ ಮಾಡಲಾಗಿದೆ ಎಂದು ಕಾಂಗ್ರೆಸ್ ವಲಯದಲ್ಲಿ ಗುಸುಗುಸು ಮಾತುಗಳು ಕೇಳಿ ಬಂದಿವೆ.

2016ರಲ್ಲಿ ನೂತನ ಜಿಲ್ಲಾ ಕಾಂಗ್ರೆಸ್ ಕಚೇರಿ ಉದ್ಘಾಟನೆಯಾಗಿತ್ತು. 2019ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್ ಸೋತಿತ್ತು. ಎಂಟು ಕ್ಷೇತ್ರದಲ್ಲಿ ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿತ್ತು. ಹೀಗಾಗಿ ವಾಸ್ತು ತಜ್ಞರ ಸಲಹೆಯಂತೆ ಮೆಟ್ಟಿಲು ನವೀಕರಣ ಮಾಡಲಾಗಿದೆ ಅನ್ನೋ ಮಾತುಕೇಳಿ ಬಂದಿದೆ.

ವಾಸ್ತು ಪ್ರಕಾರವಾಗಿ ಮೆಟ್ಟಿಲುಗಳನ್ನು ನವೀಕರಿಸಲಾಗಿದೆ ಅನ್ನೋ ವಾದವನ್ನು ಕಾಂಗ್ರೆಸ್ ಮುಖಂಡರು ನಿರಾಕರಿಸಿದ್ದಾರೆ.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version