ಬಳ್ಳಾರಿ ಜಿಲ್ಲಾಸ್ಪತ್ರೆಯ ಖ್ಯಾತ ಮಕ್ಕಳ ವೈದ್ಯನ ಅಪಹರಣ: ಭಾರೀ ಹಣಕ್ಕೆ ಬೇಡಿಕೆ

ಬಳ್ಳಾರಿ : ಬಳ್ಳಾರಿ ಜಿಲ್ಲಾಸ್ಪತ್ರೆಯ ಖ್ಯಾತ ಮಕ್ಕಳ ವೈದ್ಯ ಡಾ. ಸುನೀಲ್ ಅವರನ್ನು ದುಷ್ಕರ್ಮಿಗಳು ಅಪಹರಣ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ವೈದ್ಯ ಡಾ. ಸುನೀಲ್ ಅವರ ಬಾಯಿಗೆ ಬಟ್ಟೆ ತುರುಕಿ ಅಪಹರಿಸಿದ್ದು, ಈ ಘಟನೆ ನಗರದ ಸತ್ಯನಾರಾಯಣ ಪೇಟೆ ಬಳಿ ನಡೆದಿದೆ.
ಸುನೀಲ್ ಮೊಬೈಲ್ನಿಂದಲೇ ಅವರ ತಮ್ಮ, ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ವೇಣುಗೋಪಾಲ್ ಗುಪ್ತ ಅವರಿಗೆ ಕರೆ ಮಾಡಿರುವ ಅಪಹರಣಕಾರರು 3 ಕೋಟಿಯಷ್ಟು ಹಣ ಮತ್ತು ಚಿನ್ನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ಪೊಲೀಸರು ಅಪಹರಣಕಾರರ ಜಾಡು ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ನಗರದ ಹಲವೆಡೆ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಬಳ್ಳಾರಿ ಹೊರ ವಲಯದ ಮೋಕಾ ಕಡೆಗೆ ಅಪಹರಣಕಾರರು ಹೋಗಿದ್ದಾರೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಈ ಮಾರ್ಗದ ಚೆಕ್ಪೋಸ್ಟ್ಗಳಲ್ಲಿ ಪರಿಶೀಲನೆ ತೀವ್ರಗೊಳಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7