ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವುದು ಸುಳ್ಳು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಸ್.ಪಿ.ಪಿ. ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರ, ಶಾಸಕರ ಒತ್ತಡವಿಲ್ಲ. ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಅಭಿಯೋಜಕರನ್ನು ಬದಲಾಯಿಸಲು ಒತ್ತಡ ಹಾಕಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಅವರು ಇಂದು ಪ್ರತಿಕ್ರಿಯೆ ನೀಡಿದರು.
ಕಾನೂನಿನ ಪ್ರಕಾರ ಕ್ರಮ:
ಮಾಧ್ಯಮಗಳಲ್ಲಿ ಈ ಬಗ್ಗೆ ಬಿತ್ತರವಾಗುತ್ತಿರುವುದು ಸುಳ್ಳು ಹಾಗೂ ಸತ್ಯಕ್ಕೆ ದೂರವಾದುದು. ಕಾನೂನು ಏನು ಹೇಳುತ್ತದೆಯೋ ಅದನ್ನೇ ಮಾಡುತ್ತೇವೆ ಎಂದರು. ಪೊಲೀಸ್ ನವರಿಗೆ ಪ್ರಕರಣದಲ್ಲಿ ಎಲ್ಲಾ ಸ್ವಾತಂತ್ರ್ಯ ವನ್ನೂ ನೀಡಿದ್ದು, ಕಾನೂನಿನ ಪ್ರಕಾರ ತನಿಖೆ ಮಾಡಲು ಸೂಚಿಸಲಾಗಿದೆ ಎಂದರು. ಎಸ್. ಪಿ. ಪಿ. ಬದಲಾವಣೆಯ ಪ್ರಸ್ತಾವನೆ ನನ್ನ ಮುಂದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97




























