ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿಯ ಪತ್ನಿ
ಚಿತ್ರದುರ್ಗ: ಇತ್ತೀಚೆಗೆ ಹತ್ಯೆಗೀಡಾಗಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಪತ್ನಿ ಇಂದು ಬೆಳಗ್ಗೆ 7 ಗಂಟೆಯ ವೇಳೆಗೆ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಸಮಯದಲ್ಲಿ ಪತ್ನಿ ಸಹನಾ ಗರ್ಭಿಣಿಯಾಗಿದ್ದರು. ಸಹನಾ ನಗರದ ಜೆಸಿಆರ್ ಬಡಾವಣೆಯಲ್ಲಿರುವ ಕೀರ್ತಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ನಿಗದಿತ ದಿನಾಂಕಕ್ಕಿಂತ ಒಂದು ವಾರ ಮೊದಲೇ ಮಗುವನ್ನ ಹೆತ್ತಿದ್ದಾರೆ. ಸದ್ಯ ಮಗುವನ್ನ ವೈದ್ಯರು ನಿಗಾದಲ್ಲಿ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ರೇಣುಕಾಸ್ವಾಮಿ ಕೊಲೆಯಾದ ಬಳಿಕ ಕಣ್ಣೀರಿನಲ್ಲಿ ಜೀವನ ಸಾಗಿಸುತ್ತಿದ್ದ ಕುಟುಂಬ ಇದೀಗ ಮುದ್ದಾದ ಮಗುವನ್ನು ಬರಮಾಡಿಕೊಳ್ಳುವ ಮೂಲಕ ಸಂತಸಗೊಂಡಿದ್ದಾರೆ.
ನಟ ದರ್ಶನ್ ಮತ್ತು ಗ್ಯಾಂಗ್ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆಸಿ ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: